ಸಿಎಎ ದೇಶದ ಪೌರತ್ವ ಕೊಡಲಿದೆಯೇ ಹೊರತು ಕಸಿಯುವುದಿಲ್ಲ: ಕೊಲ್ಕತ್ತಾದಲ್ಲಿ ಮೋದಿ ಸ್ಪಷ್ಟನೆ

Promotion

ಕೋಲ್ಕತ್ತಾ, ಜನವರಿ 12, 2019 (www.justkannada.in): ಪೌರತ್ವ ತಿದ್ದುಪಡಿ ಕಾಯ್ದೆ ನಿಮ್ಮ ಪೌರತ್ವವನ್ನು ಕಿತ್ತುಕೊಳ್ಳುವುದಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಕೋಲ್ಕತ್ತಾದ ಬೇಲೂರು ಮಠದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಎ ಬಗ್ಗೆ ಪ್ರಸ್ತಾಪಿಸಿದ್ದಾರೆ. ಬದಲಾಗಿ ಪೌರತ್ವ ನೀಡುವುದು ಎಂದು ಮತ್ತೊಮ್ಮೆ ಸಾರಿ ಹೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಈ ಕಾಯ್ದೆಯನ್ನು ರಾತ್ರಿ ಹಗಲಾಗುವುದರೊಳಗೆ ತರಲಿಲ್ಲ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿ, ಚರ್ಚೆ ನಡೆಸಿ ಸದಸ್ಯರ ಅಂಗೀಕಾರ ಸಿಕ್ಕಿದ ಮೇಲೆಯೇ ಜಾರಿಯಾಗಿದ್ದು. ಇದರ ಬಗ್ಗೆ ಯುವಕರಲ್ಲಿ ತಪ್ಪು ಮಾಹಿತಿ ಮತ್ತು ಅಭಿಪ್ರಾಯವಿದೆ. ಯುವಜನತೆಗೆ ಇದನ್ನು ಅರ್ಥ ಮಾಡಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.