ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್,  ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತರಿಗೆ ನೇರ ನೇಮಕಾತಿಗೆ ಸಂಪುಟ ಸಭೆಯಲ್ಲಿ ನಿರ್ಧಾರ.

Promotion

ಬೆಂಗಳೂರು,ಡಿಸೆಂಬರ್,8,2022(www.justkannada.in): ಒಲಂಪಿಕ್ಸ್, ಕಾಮನ್ ವೆಲ್ತ್ ಗೇಮ್ಸ್,  ಏಷ್ಯನ್ ಗೇಮ್ಸ್ ನಲ್ಲಿ ಪದಕ ವಿಜೇತರಿಗೆ ಸರ್ಕಾರದಿಂದ ನೇರ ನೇಮಕಾತಿ ಮೂಲಕ ಉದ್ಯೋಗ ನೀಡಲು  ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದರು.

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ, ಪದಕ ವಿಜೇತರಿಗೆ ಎಬಿಸಿ ಗ್ರೂಪ್ ನಡಿ ಉದ್ಯೋಗ ನೀಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಗಣರಾಜ್ಯೋತ್ಸವ ಹಿನ್ನೆಲೆ ಸನ್ನಡತೆ ಆಧಾರದಲ್ಲಿ ಕೈದಿಗಳ  ಬಿಡುಗಡೆಗೆ ನಿರ್ಧರಿಸಲಾಗಿದ್ದು, 42 ಕೈದಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.

ಕೆಇಬಿಗೆ ಹಣಕಾಸು ಸಂಸ್ಥೆಯಿಂದ ಸಾಲ ಪಡೆಯಲು ಖಾತರಿ.  3 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರದ ಖಾತರಿ ಪಡೆಯಲು ಸಂಪುಟ ಒಪ್ಪಿಗೆ  ನೀಡಲಾಗಿದೆ. ಅಮೃತ ಸ್ವಾಭಿಮಾನ ಯೋಜನೆ ಅನುಷ್ಟಾನಕ್ಕೆ ಒಪ್ಪಿಗೆ  ಸೂಚಿಸಲಾಗಿದೆ ಎಂದರು.

key words: Cabinet -decision – direct -recruitment – medal -winners