ಸಂಪುಟ ವಿಸ್ತರಣೆ ವಿಚಾರ: ಏನೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ- ಬಿವೈ ವಿಜಯೇಂದ್ರ.

Promotion

ದಾವಣಗೆರೆ,ಮೇ,12,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಸಂಬಂಧ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಹರಿಹರಲ್ಲಿ ಇಂದು ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ  ವರಿಷ್ಠರ ಜತೆ  ಸಿಎಂ ಚರ್ಚೆ ನಡೆಸಿದ್ದಾರೆ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ನಿರ್ಧರಿಸುತ್ತಾರೆ. ಸದ್ಯ ನಾನು ಬಿಜೆಪಿ ಉಪಾಧ್ಯಕ್ಷನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಏನೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದರು.

ಮೈಸೂರು ಭಾಗದಲ್ಲಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಎಲ್ಲಿ ಸ್ಪರ್ಧಿಸಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಯುವಕರಿಗೆ ಪ್ರಾಶಸ್ತ್ಯ ಕೊಡುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದರು.

Key words: cabinet- expansion-bjp- BY Vijayendra.