ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಿಎಂ ಪರಮಾಧಿಕಾರ-ಶಾಸಕ ಎಂ.ಪಿ ರೇಣುಕಾಚಾರ್ಯ…

ನವದೆಹಲಿ,ಸೆಪ್ಟಂಬರ್,18,2020(www.juskannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದು ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ಜತೆ ಚರ್ಚಿಸಲಿದ್ದಾರೆ. ಈ ನಡುವೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಸಹ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ.jk-logo-justkannada-logo

ಸಂಪುಟ ವಿಸ್ತರಣೆ  ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ಸಂಪುಟ ವಿಸ್ತರಣೆ  ಸಿಎಂ ಪರಮಾಧಿಕಾರ. ಈ ವಿಚಾರದಲ್ಲಿ ಪಕ್ಷದ ಹೈಕಮಾಂಡ್, ಸಿಎಂ ತೀರ್ಮಾನವೇ ಅಂತಿಮ. ಸಚಿವ ಸ್ಥಾನ ನೀಡುವಂತೆ ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.cabinet-expansion-cm-bs-yeddyurappa-mp-renukacharya-ministerial-position

ಹಾಗೆಯೇ ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಕೈಬಿಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಊಹಾಪೂಹ ಎಂದು ನುಡಿದರು.

Key words: cabinet- expansion -CM –bs yeddyurappa-MP Renukacharya -ministerial position