ಸಚಿವ ಸಂಪುಟ ವಿಸ್ತರಣೆ ವಿಚಾರ: ಉಪಚುನಾವಣೆಯಲ್ಲಿ ಸೋತವರ ಪರ ಬ್ಯಾಟ್ ಬೀಸಿದ ಡಿಸಿಎಂ ಲಕ್ಷ್ಮಣ್ ಸವದಿ…

Promotion

ಬೆಳಗಾವಿ,ಜ,25,2020(www.justkannada.in):  ಉಪಚುನಾವಣೆಯಲ್ಲಿ ಸೋತವರಿಗೂ ಸಚಿವ ಸ್ಥಾನ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಲಕ್ಷ್ಮಣ್ ಸವದಿ, ಪಾಪ ಏನೋ ದುರಾದೃಷ್ಟ ಉಪಚುನಾವಣೆಯಲ್ಲಿ ಸೋತಿದ್ದಾರೆ.  ಅವರು ಸಚಿವ ಸ್ಥಾನಕೇಳುದರಲ್ಲಿ ತಪ್ಪೇನು ಇಲ್ಲ ಎಂದು ಹೆಚ್,ವಿಶ್ವನಾಥ್ ಮತ್ತು ಮಾಜಿ ಸಚಿವ ಎಂಟಿಬಿ ನಾಗರಾಜ್ ಪರ ಬ್ಯಾಟ್ ಬೀಸಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ  ಒಂದು ವಾರದಲ್ಲಿ ಪೂರ್ಣಗೊಳ್ಳಲಿದೆ. ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಗೊಂದಲ ಇಲ್ಲ. ಪಾಪ ಏನೋ ದುರಾದೃಷ್ಟ ಉಪಚುನಾವಣೆಯಲ್ಲಿ ಸೋತಿದ್ದಾರೆ. ಎಲ್ಲರಿಗೂ ಆಪೇಕ್ಷೆಗಳಿರುತ್ತವೆ. ಹೀಗಾಗಿ ಅವರು ಸಚಿವ ಸ್ಥಾನಕೇಳುವುದರಲ್ಲಿ ತಪ್ಪೇನು ಇಲ್ಲ.  ಸೋತವರಿಗೆ ಮಂತ್ರಿಸ್ತಾನ  ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನೋಡಿಕೊಳ್ತಾರೆ ಎಂದರು.

ಸಂಪುಟದಿಂದ ಡಿಸಿಎಂ ಲಕ್ಷ್ನಣ್ ಸವದಿ ಕೈಬಿಟ್ಟು ಆರ್. ಶಂಕರ್ ಗೆ ಸ್ಥಾನ ನೀಡಬೇಕೆಂಬ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಪಕ್ಷ ಕೈಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ.  ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡು ಎಂದರೇ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧ ಎಂದು ನುಡಿದರು.

Key words: Cabinet expansion -DCM Laxman Sawadi-batting – by-election.