ಯಾವುದೇ ಸಮಸ್ಯೆಯಿಲ್ಲದೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ- ಸಚಿವ ಎಂ.ಬಿ ಪಾಟೀಲ್

Promotion

ನವದೆಹಲಿ,ಮೇ,25,2023(www.justkannada.in): ಯಾವುದೇ ಸಮಸ್ಯೆಯಿಲ್ಲದೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಪ್ರಕ್ರಿಯೆ ನಡೆಯಲಿದೆ ಎಂದು  ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಇಂದು ಸಭೆಯಿದೆ. ಅದರಲ್ಲಿ ಎಲ್ಲವೂ ಬಗೆಹರಿಯಲಿದೆ. ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸುಸೂತ್ರವಾಗಿ ನಡೆಯಲಿದೆ ಎಂದರು.

ಪ್ರಾದೇಶಿಕವಾರು, ಸಮುದಾಯವಾರು ಪ್ರಾತಿನಿಧ್ಯ ದೊರೆಯಬೇಕು. ಹೀಗಾಗಿ ಸಂಪುಟ ವಿಸ್ತರಣೆ ವಿಚಾರ ಕುರಿತು ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷರು ಚರ್ಚಿಸಿ ಫೈನಲ್ ಮಾಡ್ತಾರೆ. ಯಾವುದೇ ಸಮಸ್ಯೆಯಿಲ್ಲದೆ ಸಂಪುಟ ವಿಸ್ತರಣೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Key words: cabinet expansion- done- without -any problem-Minister- MB Patil