ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ರೆ ಇರೋ ನನ್ನ ಮಂತ್ರಿ ಸ್ಥಾನವು ಹೋಗುತ್ತೆ ಎಂದ ಸಚಿವ ಎಸ್.ಟಿ ಸೋಮಶೇಖರ್…

ಮೈಸೂರು, ನವೆಂಬರ್,4,2020(www.justkannada.in): ಸಚಿವ ಸಂಪುಟ ಮುಖ್ಯಮಂತ್ರಿಗಳ ಪರಮಾಧಿಕಾರ. ಸಂಪುಟ ವಿಸ್ತರಣೆ ಬಗ್ಗೆ ಮಾತನಾಡೋಕೆ ನನಗೆ ಅಧಿಕಾರ ಇಲ್ಲ. ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ರೆ ಇರೋ ನನ್ನ ಮಂತ್ರಿ ಸ್ಥಾನವು ಹೋಗುತ್ತೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಮೈಸೂರಿನ ಚಾಮರಾಜ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಿದರು. ವಾರ್ಡ್ ನಂ.4 ಲೋಕನಾಯಕ ನಗರದ ಸಂಜೀವಿನಿ ವೃತ್ತದ ಬಳಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ 1.99ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಿದರು.  ಕೆ ಆರ್ ಎಸ್ ಮುಖ್ಯರಸ್ತೆಯಿಂದ ಬಸವನಗುಡಿ ಮುಖಾಂತರ ಸೂರ್ಯಬೇಕರಿ ತಲುಪುವ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದ್ದು, ರಸ್ತೆ ಅಗಲೀಕರಣ ಹಾಗೂ ಡಾಂಬಾರೀಕರಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ಎಲ್.ನಾಗೇಂದ್ರ ನೇತೃತ್ವದಲ್ಲಿ ‌ಗುದ್ದಲಿಪೂಜೆ ಕಾರ್ಯಕ್ರಮ ನೆರವೇರಿತು. ಈ ವೇಳೆ ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.jk-logo-justkannada-logo

ಇನ್ನು ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಟಿ ಸೋಮಶೇಖರ್,  ನಾನು ಈಗಾಗಲೇ ಹೇಳಿದ್ದೇನೆ, ಸಚಿವ ಸಂಪುಟ ಮುಖ್ಯಮಂತ್ರಿಗಳ ಪರಮಾಧಿಕಾರ. ನಮಗೆ ಚುನಾವಣೆ ಪ್ರಚಾರ ಮಾಡೊದಕ್ಕೆ, ಯಾರು ಗೆಲ್ತಾರೆ, ಸೋಲ್ತಾರೆ ಅಂತ ಹೇಳೊದಕ್ಕೆ ಅಧಿಕಾರ ಇದೆ. ಆದ್ರೆ ಸಚಿವ ಸಂಪುಟದ ಬಗ್ಗೆ ಮಾತನಾಡಲು ನನಗೆ ಅಧಿಕಾರವಿಲ್ಲ. ಮಾಧ್ಯಮದ ಮಾತು ಕೇಳಿ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ರೆ ನನ್ನ ಮಂತ್ರಿ ಸ್ಥಾನವು ಹೋಗುತ್ತೆ. ಸಂಪುಟ ವಿಸ್ತರಣೆ ಬಗ್ಗೆ ಮಾತನಾಡೋಕೆ ನನಗೆ ಅಧಿಕಾರ ಇಲ್ಲ. ಮಾಧ್ಯಮದವರು ನನಗೆ ಅಧಿಕಾರ ಕೊಡಿಸಿದರೆ ನಾನು ಮಾತನಾಡಬಹುದು. ನನಗೆ ಎಷ್ಟು ಅಧಿಕಾರ ಇದೆ ಅಷ್ಟಕ್ಕೆ ಮಾತ್ರ ಉತ್ತರಿಸುತ್ತೇನೆ. ಪದೆ ಪದೆ ಮಂತ್ರಿಮಂಡಲದ ಪ್ರಶ್ನೆ ಕೇಳಿಬೇಡಿ. ಅದಕ್ಕೆ ನಾನು ಉತ್ತರ ಕೊಟ್ಟರೆ ಇರೋ ಮಂತ್ರಿ ಸ್ಥಾನವನ್ನ ಕಳೆದುಕೊಳ್ಳಬೇಕಾಗುತ್ತದೆ ಎಂದರು.

cabinet-expansion-ministerial-position-minister-st-somashekhar-mysore

 

Key words: cabinet-expansion-ministerial –position- Minister- ST Somashekhar -mysore