ಸಂಪುಟ ವಿಸ್ತರಣೆಯೋ? ಪುನರಚನೆಯೋ? ಈ ಬಗ್ಗೆ ಅಮಿತ್ ಶಾ, ಮೋದಿ ಮತ್ತು ಆ ದೇವರಿಗೆ ಮಾತ್ರ ಗೊತ್ತು- ಹೆಚ್.ವಿಶ್ವನಾಥ್…

ಮೈಸೂರು, ನವೆಂಬರ್,20,2020(www.justkannada.in):  ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿರುವ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್,  ಸಂಪುಟ ವಿಸ್ತರಣೆಯೋ? ಪುನರಚನೆಯೋ? ಅದು ಯಾವಾಗ ಎಂಬುದೆಲ್ಲ ಅಮಿತ್ ಶಾ ಮೋದಿ ಮತ್ತು ಆ ದೇವರಿಗೆ ಮಾತ್ರ ಗೊತ್ತು ಎಂದಿದ್ದಾರೆ.kannada-journalist-media-fourth-estate-under-loss

ಮೈಸೂರಿನಲ್ಲಿ ಇಂದು ಮಾಧ್ಯಮದ ಜತೆ  ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಒಂದು ಪರಿಪೂರ್ಣವಾದ ಸಂಪುಟದ ಅವಶ್ಯಕತೆ ಇದೆ. ಜನರ ಜೊತೆಯಲ್ಲಿ ಇದ್ದು ಕೆಲಸ ಮಾಡುವ ಸದೃಡ ಸಂಪುಟ ಬೇಕು. ಅದು ಆದಾಗ ಸರ್ಕಾರಕ್ಕೆ ಒಳ್ಳೆಯ ಹೆಸರು ತರುತ್ತದೆ. ದೇವರಾಜ ಅರಸ್ ಕಾಲದಲ್ಲಿ ಸದೃಢ ಸಂಪುಟ ಇದ್ದ ಕಾರಣ ಎರಡು ಬಾರಿ ಆಡಳಿತ ಮಾಡಲು ಸಾಧ್ಯವಾಯಿತು. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದೆಹಲಿ ಕೇಂದ್ರಿತ ಪಕ್ಷಗಳು. ಈಗಾಗಿ ಕೆಲವು ನಿರ್ಣಯ ತೆಗೆದುಕೊಳ್ಳಲು ವಿಳಂಬವಾಗುತ್ತದೆ. ಇಲ್ಲಿಯ ಲೆಕ್ಕಚಾರ ಬೇರೆ ಅಲ್ಲಿಯದ್ದೆ ಬೇರೆ ಎಂದರು.

ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಸಂಬಂಧ ಶೀಘ್ರವಾಗಿ ತೀರ್ಮಾನವಾಗುತ್ತೆ. ನನಗೂ ಸಂಪುಟದಲ್ಲಿ ಸ್ಥಾನ ನೀಡಲು  ಅವಕಾಶ ಇದೆ. ಕೊಡುವ ಬಯಕೆಯು ಅವರಿಗೆ ಇದೆ. ನೋಡೋಣಾ ಏನೇನಾಗುತ್ತೆ ಎಂದು ಹೆಚ್.ವಿಶ್ವನಾಥ್ ತಿಳಿಸಿದರು.

ಹೆಚ್.ಡಿ ಕುಮಾರಸ್ವಾಮಿ ಆಗಾಗ ಸಖರ ಹುಡುಕಾಟ ನಡೆಸುತ್ತಿರುತ್ತಾರೆ…

ಮಂಡ್ಯ ಡಿಸಿಸಿ ಬ್ಯಾಂಕ್ ನಲ್ಲಿ ಬಿಜೆಪಿ ಜೆ.ಡಿ.ಎಸ್ ಜೊತೆ ಒಪ್ಪಂದ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಕುಮಾರಸ್ವಾಮಿ ಆಗಾಗ ಸಖರ ಹುಡುಕಾಟ ನಡೆಸುತ್ತಿರುತ್ತಾರೆ. ಅವರಿಗೆ ಯಾರು ಯಾವಾಗ ಸಖ ಆಗುತ್ತಾರೆ ಗೊತ್ತಿಲ್ಲ. ಸ್ಥಿರತೆ ಸದೃಢತೆಗಾಗಿ ಸಖರ ಹುಡುಕಾಟ ಇರುತ್ತದೆ. ಮುಂದೆ ಯಾರು ಅವರಿಗೆ ಸಖರಾಗುತ್ತಾರೆ ಎಂಬುದು ಗೊತ್ತಿಲ್ಲ ಎಂದು ಕಾಲೆಳೆದರು.cabinet expansion-Reconstruction- Amit Shah-pm Modi and - knows –MLC- H.Vishwanath ...

ವೀರಶೈವ ಲಿಂಗಾಯತ ನಿಗಮ ಸ್ಥಾಪನೆಗೆ ಆಕ್ಷೇಪ..

ವೀರಶೈವ ಲಿಂಗಾಯತ ನಿಗಮ ಸ್ಥಾಪನೆ ವಿಚಾರ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಹೆಚ್.ವಿಶ್ವನಾಥ್,  ಅದು ಸರಿ ಅಲ್ಲ. ಈ ನೆಲ ಕರ್ನಾಟಕ ಬಹಳ ವಿಶೇಷವಾದದ್ದು. ಕುವೆಂಪುರವರು ಹೇಳಿದ ಹಾಗೆ ಚೆಲುವ ಕನ್ನಡ ನಾಡು. ಇದು ಶಾಂತಿಯ ನೆಲಯ ಬೀಡು. ಈ ಜಾತಿ ಪ್ರಾಧಿಕಾರಗಳನ್ನ ಸ್ಥಾಪಿಸಿ ಅಶಾಂತಿಯನ್ನ ಎಬ್ಬಿಸೋದಕ್ಕೆ ಅವಕಾಶ ಕೊಡಬಾರದು. ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ‌ ಸಿದ್ದಿಪುರುಷರ ಕಲ್ಪನೆಯಲ್ಲಿ ಸಂವಿಧಾನ ರಚನೆಯಾಗಿದೆ. ಬಸವೇಶ್ವರ ಹೆಸರಲ್ಲಿ ಅಂಬೇಡ್ಕರ್ ಮಹಾತ್ಮ ಗಾಂಧಿ ಹೆಸರಲ್ಲಿ ಅವರ ಆಶಯಗಳಂತೆ ಸರ್ಕಾರಗಳನ್ನ ನಡೆಸಬೇಕಿದೆ ಆ ರೀತಿಯಲ್ಲಿ  ಆಡಳಿತ ನಡೆಸುವಂತೆ ಕೇಳಿಕೊಳ್ಳುತ್ತೇನೆ ಎಂದರು.

Key words: cabinet expansion-Reconstruction- Amit Shah-pm Modi and – knows –MLC- H.Vishwanath …