ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಭೇಟಿ ಬಳಿಕ ಬೆಂಗಳೂರಿನತ್ತ ಸಿಎಂ ಬಿಎಸ್ ವೈ: ಸಂಪುಟ ವಿಸ್ತರಣೆ ಬಗ್ಗೆ ಏನಂದ್ರು ಗೊತ್ತೆ…?

ನವದೆಹಲಿ,ನವೆಂಬರ್,18,2020(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಕುರಿತು ಚರ್ಚಿಸಲು ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನ ಭೇಟಿಯಾಗಿ ಚರ್ಚಿಸಿ ಇದೀಗ ವಾಪಸ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.cabinet-expension-cm-bs-yeddyurappa-meet-bjp-president-jp-nadda

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಸಂಪುಟ ವಿಸ್ತರಣೆ ಅಥವಾ ಪುನರಚನೆ  ವರಿಷ್ಠರ ನಿರ್ಧಾರ. ವರಿಷ್ಠರು ಏನು ತೀರ್ಮಾನ ಕೈಗೊಳ್ಳುತ್ತಾರೋ ಗೊತ್ತಿಲ್ಲ. ವರಿಷ್ಠರು ಒಪ್ಪಿಗೆ ಕೊಟ್ಟ ಬಳಿಕ ಎಲ್ಲಾ ವಿವರ ನೀಡುತ್ತೇನೆ ಎಂದರು.

 

ಸಂಪುಟ ವಿಸ್ತರಣೆ ಬಗ್ಗೆ ಸದ್ಯದಲ್ಲೇ ಸೂಚನೆ ನೀಡುವುದಾಗಿ ವರಿಷ್ಠರು ತಿಳಿಸಿದ್ದಾರೆ. ವರಿಷ್ಟರ ತೀರ್ಮಾನ ಏನು ಎಂಬುದಾಗಿ ನೋಡಬೇಕಿದೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಇನ್ನೂ ಮೂರ್ನಾಲ್ಕು ದಿನ ಸಮಯಾವಾಕಾಶ ಕೋರಿದ್ದಾರೆ. ಬೇರೆ ಯಾರನ್ನೂ ಭೇಟಿಯಾಗುತ್ತಿಲ್ಲ. ವಾಪಾಸ್‌ ಬೆಂಗಳೂರಿಗೆ ತೆರಳುತ್ತಿದ್ದೇನೆ ಎಂದರು.

 

ವರಿಷ್ಠರು ಉತ್ತಮವಾಗಿ ಸ್ಪಂದಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಏನ್ ಹೇಳ್ತಾರೆ ನೋಡೋಣ. ಇನ್ನು ಎರಡು ಮೂರು ದಿನಗಳಲ್ಲಿ ಚರ್ಚಿಸಿ ತೀರ್ಮಾನ ಮಾಡಲಿದ್ದಾರೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಸಿಎಂ ಬಿಎಸ್ ವೈ ಬೆಂಗಳೂರಿಗೆ ವಾಪಸ್ ಆಗುತ್ತಿದ್ದು ಸದ್ಯ ವರಿಷ್ಠರ ಜತೆ ನಡೆದ ಚರ್ಚೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟಿಲ್ಲ.

Key words: cabinet expension-CM BS Yeddyurappa-meet- bjp president- JP Nadda