ಇಂದು ಸಚಿವ ಸಂಪುಟ ಸಭೆ: ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ಸಿಗುತ್ತಾ ಗ್ರೀನ್ ಸಿಗ್ನಲ್…?

Promotion

ಬೆಂಗಳೂರು,ಆ,20,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಮೇಲೂ ಕೊರೋನಾ ಕಾರ್ಮೋಡ ಕವಿದಿದ್ದು, ಈ ಮಧ್ಯೆ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ದಸರಾ ಆಚರಣೆ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.jk-logo-justkannada-logo

ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ, ಸರಳ ದಸರಾ ಅಥವಾ ಸಾಂಪ್ರದಾಯಿಕ ದಸರಾ ಆಚರಣೆ ಕುರಿತು ಪ್ರಸ್ತಾಪವಾಗುವ ಸಾಧ್ಯತೆ ಇದೆ.  ಈ ಸಂಬಂಧ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಈಗಾಗಲೇ ತಿಳಿಸಿದ್ದು ಚರ್ಚೆ ಬಳಿಕ ಸ್ಪಷ್ಟ ಮಾಹಿತಿ ಸಿಗಲಿದೆ.cabinet-meeting-today-green-signal-mysore-dasara-celebration

ರಾಜ್ಯದೆಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗಿದ್ದು ಹಾಗೂ ಭಾರಿ ಮಳೆಯಿಂದ ಪ್ರವಾಹ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಮೈಸೂರು ದಸರಾ ಆಚರಣೆ ವಿಚಾರ ಚರ್ಚೆಗೆ ಬಂದಿರಲಿಲ್ಲ. ಇದೀಗ ಕ್ಯಾಬಿನೆಟ್ ನಲ್ಲಿ ದಸರಾ ಆಚರಣೆ ಬಗ್ಗೆ ಚರ್ಚೆಯಾಗಲಿದ್ದು, ಚರ್ಚೆ ಬಳಿಕ ದಸರಾ ಹೈಪವರ್ ಕಮಿಟಿ ಮೀಟಿಗ್ ನಿಗದಿ ಮಾಡುವ ಸಾಧ್ಯತೆ ಇದೆ. ಹೀಗಾಗಿ ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆಗೆ ಗ್ರೀನ್ ಸಿಗ್ನಲ್ ಸಿಗುತ್ತಾ ಕಾದು ನೋಡಬೇಕಿದೆ.

Key words: Cabinet –meeting- today-Green signal-Mysore Dasara -celebration