ಸಂಪುಟದಲ್ಲಿ ಸ್ಥಾನ ಪಡೆಯುವ ವಿಚಾರ: ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ- ಶಾಸಕ ಎಸ್.ಎ ರಾಮದಾಸ್ ಹೇಳಿಕೆ..

Promotion

ಮೈಸೂರು,ಜು,26,2019(www.justkannada.in): ರಾಜ್ಯದ ಸಿಎಂ ಆಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುವಮ ಮೂಲಕ ಬಿಜೆಪಿ ಸರ್ಕಾರ ಅಧಿಕಾರಕ್ಕೇರುತ್ತಿದ್ದು ಈ ನಡುವೆ ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ವಿಚಾರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಸ್,ಎ ರಾಮದಾಸ್, ಪಕ್ಷ ಯಾವುದೇ ನಿರ್ಣಯ ಕೈಗೊಂಡರೂ ನಾನು ಬದ್ದ. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುತ್ತೇನೆ. ರಾಜಕಾರಣದಲ್ಲಿ ನಾನು ಯಾವತ್ತೂ ಯಾವುದೇ ರೀತಿಯ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.

1994 ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಟಿಕೆಟ್ ಕೇಳಿದ್ರೂ ಸಹ ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿತ್ತು. 2008ರಲ್ಲಿ ಸಂಪುಟ ಸೇರುವ ಅವಕಾಶ ತಪ್ಪಿತ್ತು. ಅಂತಿಮ ಕ್ಷಣದಲ್ಲಿ ಶ್ರೀರಾಮ ಪಟ್ಟಾಭಿಷೇಕ ಕಳೆದುಕೊಂಡಂತೆ ನನಗೂ ಅನುಭವ ಆಗಿತ್ತು. ಇದೀಗ ಯಡಿಯೂರಪ್ಪ ಕೈ ಬಲಪಡಿಸುವುದು ನಮ್ಮ ಗುರಿ ಎಂದು ಎಸ್ ಎ ರಾಮದಾಸ್ ತಿಳಿಸಿದರು.

Key words: cabinet – minister-position-  MLA SA Ramadas-reaction-mysore