ನಾಳೆ ಅಥವಾ ನಾಳಿದ್ದು ಸಂಪುಟ ವಿಸ್ತರಣೆ: ಕಾಂಗ್ರೆಸ್ ನವರು ತಲೆತಿರುಕರು ಎಂದ ಸಿಎಂ ಬಿಎಸ್ ಯಡಿಯೂರಪ್ಪ…

ನವದೆಹಲಿ,ಆ,17,2019(www.justkannada.in): ಸಚಿವ ಸಂಪುಟ ರಚನೆ ಸಂಬಂಧ ಇಂದು ಖಂಡಿತ ಅಮಿತ್ ಶಾ ಅವರನ್ನ ಭೇಟಿಯಾಗುವೆ.ಈ ವೇಳೆ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಸಿಗುತ್ತೆ ಎಂಬ ವಿಶ್ವಾಸವಿದೆ. ನಾಳೆ ಅಥವಾ ನಾಳಿದ್ದು ಸಂಪುಟ ವಿಸ್ತರಣೆ ಆಗಲಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.

ನವದೆಹಲಿಯಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನವರು ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷ ಮಾಡುತ್ತಿದೆ ಎಂಬ ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ನವರು ತಲೆತಿರುಕರು. ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.

ಇಂದು ಅಮಿತ್ ಶಾ ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಚರ್ಚೆ ಮಾಡುವೆ. ಹೀಗಾಗಿ ಇಂದು ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದರು.

ಕೇಂದ್ರ ಸರ್ಕಾರ ನೆರೆ ಪರಿಹಾರವನ್ನ  ಶೀಘ್ರವೇ ಬಿಡುಗಡೆ ಮಾಡಲಿದೆ. ಈಗಾಗಲೇ ಗೃಹ ಮತ್ತು ವಿತ್ತ ಸಚಿವರು ಪರಿಶೀಲನೆ ನಡೆಸಿದ್ದಾರೆ. ಪ್ರಧಾನಿಯವರಿಗೂ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ತಾರತಮ್ಯ ಮಾಡುವುದಿಲ್ಲ. ಇಂದು ಉನ್ನತ ಮಟ್ಟದ ಸಮಿತಿ ಸಭೆ ನಡೆಯಲಿದೆ. ಸಭೆಯ ಬಳಿಕ ರಾಜ್ಯಕ್ಕೆ ಪರಿಹಾರ ಧನ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹೈ ಅಲರ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ವೈ, ಕೇಂದ್ರದಿಂದ ಸೂಚನೆ ಬಂದಿದೆ. ಹೀಗಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲಿ ಭದ್ರತೆ ಹೆಚ್ಚು ಮಾಡಲಾಗಿದೆ ಎಂದರು.

Key words: cabinet –structure-CM BS Yeddyurappa- says -Congress – New Delhi