ಸಂಪುಟ ರಚನೆ ಸಿಎಂ ಪರಮಾಧಿಕಾರ: ಅವರ ನಿರ್ಧಾರಕ್ಕೆ ನಾವು ಬದ್ಧ- ಮಾಜಿ ಸಚಿವ ಮುರುಗೇಶ್ ನಿರಾಣಿ.

Promotion

ಬೆಂಗಳೂರು,ಜುಲೈ,29,2021(www.justkannada.in):  ಸಚಿವ ಸಂಪುಟ ರಚನೆ ಸಿಎಂ ಪರಮಾಧಿಕಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.jk

ಈ ಕುರಿತು ಇಂದು ಮಾತನಾಡಿದ ಮುರುಗೇಶ್ ನಿರಾಣಿ, ಪ್ರವಾಹ ಪೀಡಿತ ಪ್ರದೇಶಕ್ಕೆ ಸಿಎಂ ಹೋಗಿದ್ದಾರೆ.  ನಾಳೆ ವರಿಷ್ಠರ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಅವರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದರು.

ಸಿಎಂ ಬೊಮ್ಮಾಯಿ ಸಂಪುಟ ಸೇರದಿರಲು ಜಗದೀಶ್ ಶೆಟ್ಟರ್ ನಿರ್ಧಾರ ಕುರಿತು ಪ್ರತಿಕ್ರಿಯಿಸಿದ ಮುರುಗೇಶ್ ನಿರಾಣಿ,  ಜಗದೀಶ್ ಶೆಟ್ಟರ್   ಹಿರಿಯರು, ಸಿಎಂ ಆಗಿದ್ದವರು.ಯಾವ ಆಧಾರದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದರು.

Key words: cabinet- structure- CM –paramount-Former minister -Murugesh Nirani