ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಿ- ಮೈಸೂರಿನಲ್ಲಿ ರೈಲು ತಡೆ ಚಳುವಳಿ…

Promotion

ಮೈಸೂರು,ಜನವರಿ,30,2021(www.justkannada.in): ಮರಾಠ ಪ್ರಾಧಿಕಾರ ರದ್ದು ಮಾಡುವಂತೆ ಒತ್ತಾಯಿಸಿ ಮೈಸೂರು ಕನ್ನಡ ಚಳುವಳಿ ಸಮಿತಿಯಿಂದ ರೈಲು ತಡೆ ಚಳುವಳಿ ನಡೆಸಲಾಯಿತು.jk

ಕನ್ನಡ ಪರ ಹೋರಾಟಗಾರ ಮೂಗೂರು ನಂಜುಂಡಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕನ್ನಡಪರ ಹೋರಾಟಗಾರರು  ಆಕ್ರೋಶ ವ್ಯಕ್ತಪಡಿಸಿದರು. ಹಾಗೆಯೇ ಮೈಸೂರಿನಲ್ಲಿ ರೈಲು ತಡೆಯಲು ಮುಂದಾದ ಕನ್ನಡ ಪರ ಹೋರಾಟಗಾರರನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದರು.

cancel-maratha-development-corporation-rail-movement-mysore-kannada-organization
ಕೃಪೆ- internet

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಉದ್ದಟತನದ ಹೇಳಿಕೆ ನೀಡುತ್ತಿದ್ದಾರೆ. ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರ ಮಹಾರಾಷ್ಟ್ರ ಏಕೀಕರಣ ಹೋರಾಟ ಸಮಿತಿಯನ್ನ ರದ್ದು ಮಾಡಬೇಕು. ರಾಜ್ಯ ಸರ್ಕಾರವೂ ಮರಾಠ ಅಭಿವೃದ್ಧಿ ನಿಗಮವನ್ನು ರದ್ದು ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಕನ್ನಡಪರ ಹೋರಾಟಗಾರರು ಎಚ್ಚರಿಕೆ ನೀಡಿದರು.

Key words: Cancel – Maratha Development Corporation- Rail -movement – Mysore-kannada-organization