7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ಧು ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್..

ಬೆಂಗಳೂರು,ಜೂ,11,2020(www.justkannada.in): ರಾಜ್ಯದಲ್ಲಿ 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ವಿಚಾರದಲ್ಲಿ ಯಾವುದೇ ನಿರ್ಣಯವಾಗಿಲ್ಲ ಎಂದು ಟ್ವಿಟ್ಟರ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ್ದ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ  7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ದು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿಕೆ ನೀಡಿದ್ದರು.cancel-online-education-7th-class-education-minister-suresh-kumar-clarified

ಆದರೆ ಇದೀಗ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ , 7ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ರದ್ಧು ಇನ್ನು ಅಧಿಕೃತವಾಗಿಲ್ಲ. ಈ ಬಗ್ಗೆ ಯಾವುದೇ ನಿರ್ಣಯವಾಗಿಲ್ಲ. ಕೆಲ ಸಚಿವರು ಆಲ್ ಲೈನ್ ಶಿಕ್ಷಣ ರದ್ದು ಕುರಿತು ಸಲಹೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Key words: Cancel -online education – 7th class-  Education Minister -Suresh Kumar -clarified