ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ಧು- ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ.

ಬೆಂಗಳೂರು,ಜೂನ್,4,2021(www.justkannada.in):  ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನ ರದ್ಧು ಮಾಡಲಾಗಿದ್ದು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.jk

ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನಿಡಿದ ಸಚಿವ ಸುರೇಶ್ ಕುಮಾರ್, ಈ ಬಾರಿ ಸದ್ಯಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ನಡೆಸುವುದಿಲ್ಲ. ಪ್ರಥಮ ಪಿಯುಸಿ ಪರೀಕ್ಷೆಯ ಆಧಾರದ ಮೇಲೆ ಗ್ರೇಡಿಂಗ್ ನೀಡಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲಾಗುತ್ತಿದೆ ಎಂದಿದ್ದಾರೆ.

 ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲದೆನೇ ಯಾವ ರೀತಿ ಗ್ರೇಡಿಂಗ್‌ ಕೊಡಬಹುದು, ಕಲಿಕಾ ಮಟ್ಟದ ಬಗ್ಗೆ ಯೋಚನೆ ಮಾಡಿದ್ದೇವೆ. ರದ್ದು ಮಾಡಿದ ರಾಜ್ಯಗಳನ್ನು ಸಂಪರ್ಕ ಮಾಡಿ ರಿಸಲ್ಟ್‌ ಹೇಗೆ ಮಾಡುತ್ತೀರಿ ಎಂದು ಕೇಳಿದ್ದೇವೆ. ಯಾರು ಕೂಡ ತೆಗೆದುಕೊಳ್ಳಬಹುದಾದ ಮಾನದಂಡದ ಬಗ್ಗೆ ಖಚಿತತೆ ಇಲ್ಲ. ಮುಂದೆ ಯೋಚನೆ ಮಾಡುತ್ತೇವೆ ಎಂದಿದ್ದಾರೆ.

ಇನ್ನು ಪ್ರಥಮ ಪಿಯುಸಿ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ. ಫಲಿತಾಂಶದ ಬಗ್ಗೆ ಸಮಾಧಾನ ಇಲ್ಲದ ವಿದ್ಯಾರ್ಥಿಗಳಿಗೆ ಕೊರೋನಾ ಮುಗಿದ ಬಳಿಕ ಪರೀಕ್ಷೆ ನಡೆಸುತ್ತೇವೆ. ಸದ್ಯ ಪರೀಕ್ಷೆ ಇಲ್ಲದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿದೆ. ಸಿಇಟಿಗೆ ತಯಾರಿ ಮಾಡಿಕೊಳ್ಳಿ ನಿಮ್ಮ ಮುಂದಿನ ವಿಧ್ಯಭ್ಯಾಸಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ.

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ.   ಸಮಾಜ, ಗಣಿತ, ವಿಜ್ಞಾನಕ್ಕೆ ಪರೀಕ್ಷೆ ನಡೆಸುತ್ತೇವೆ. ಜುಲೈ 3ನೇ ವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದ್ದು,  ಬಹು ಆಯ್ಕೆ ಮಾದರಿ ಮೂಲಕ ಪರೀಕ್ಷೆ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

Key words: Cancel -second PUC-exam-  Education Minister- Suresh Kumar -announces.