Promotion
ಕಲಬುರಗಿ,ಡಿಸೆಂಬರ್,7,2022(www.justkannada.in) ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಿಪಿಐ ಹಾಗೂ ಅವರ ಪತ್ನಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಸಿಂದಗಿ ಸಿಪಿಐ ರವಿ ಉಕ್ಕುಂದ್(45) ಪತ್ನಿ ಮದುಮತಿ(40) ಮೃತಪಟ್ಟವರು.
ಇಂದು ನೆಲೋಗಿ ಕ್ರಾಸ್‍ನಲ್ಲಿ ನಿಂತಿದ್ದ ಕಂಟೇನರ್ ಹಿಂಬದಿಗೆ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸಿಂದಗಿ ಸಿಪಿಐ ರವಿ ಉಕ್ಕುಂದ್ ಪತ್ನಿ ಮದುಮತಿ ಸಾವನ್ನಪ್ಪಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: car -collided – lorry-CPI – wife -died