ಮರಕ್ಕೆ ಕಾರು ಡಿಕ್ಕಿ: ದಂಪತಿ ದುರ್ಮರಣ: ಮಕ್ಕಳಿಗೆ ಗಂಭೀರ ಗಾಯ.

Promotion

ಚಿಕ್ಕಮಗಳೂರು,ಏಪ್ರಿಲ್,21,2023(www.justkannada.in): ಮರಕ್ಕೆ ಕಾರು ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಬೆಟ್ಟದತಾವರೆ ಬಳಿ ಈ ಘಟನೆ ನಡೆದಿದೆ. ದಂಪತಿ ಶ್ರೀನಿವಾಸ್ ಮತ್ತು  ಶ್ವೇತಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಕ್ಕಳಿಬ್ಬರಿಗೆ ಗಂಭೀರ ಗಾಯಗಳಾಗಿದ್ದು,ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಬೆಂಗಳೂರಿನಿಂದ ಭದ್ರಾವತಿಗೆ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Car -collides – tree- Couple- dies