ಬಸ್ ಗೆ ಕಾರು ಡಿಕ್ಕಿ: ಮಕ್ಕಳು ಸೇರಿ ನಾಲ್ವರು ದುರ್ಮರಣ…

ಮಂಡ್ಯ,ಜು,27,2019(www.justkannada.in): ಕಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಕಾರು ಡಿಕ್ಕಿಯಾಗಿ ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ಧೂರು ತಾಲ್ಲೂಕಿನಲ್ಲಿ ನಡೆದಿದೆ.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಕಾಲೋನಿ  ಬಳಿ ಈ ಘಟನೆ ನಡೆದಿದೆ. ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.  ಅಪಘಾತಕ್ಕೀಡಾದ ಕಾರು ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಎನ್ನಲಾಗಿದೆ. ಕಾರಿನಲ್ಲಿದ್ದ ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ನಿಂತಿದ್ದ ಕಾರಿಗೆ ಡಿಕ್ಕಿಯಾಗುವುದನ್ನ ತಪ್ಪಿಸಲು ಹೋಗಿ ಕಾರು ಡಿವೈಡರ್ ಮೇಲೆ ಹಾರಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರ ಗುರುತು ತಿಳಿದು ಬಂದಿಲ್ಲ.

Key words: Car -collision – bus- Four –dead-mandya