‘ ಜುಲೈನಲ್ಲಿ ಆಗಿರುವ ಸರ್ಕಾರದ ಆದೇಶ , ವರ್ಗಾವಣೆ ತಡೆ ಹಿಡಿ ಹಿಡಿಯಿರಿ ; ಅಧಿಕಾರ ವಹಿಸಿಕೊಳ್ಳುವ ಮೊದಲೇ ಸಿಎಸ್ ಗೆ ಸೂಚಿಸಿದ ಬಿಎಸ್ ವೈ:

 

ಬೆಂಗಳೂರು, ಜು.26, 2019 : (www.justkannada.in news) : ಜುಲೈ ತಿಂಗಳಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಹೊಸ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶಗಳನ್ನು ತಕ್ಷಣವೇ ಮುಂದಿನ ಪರಿಶೀಲನೆಯಾಗುವ ತನಕ ತಡೆ ಹಿಡಿಯುವಂತೆ ಸೂಚಿಸಲಾಗಿದೆ.

ಈ ಸಂಬಂಧ ಸುತ್ತೊಲೆ ಹೊರಡಿಸಿರುವ ಸರಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ನಿಯೋಜಿತ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಈ ನಿರ್ದೇಶನ ನೀಡಿರುವುದಾಗಿ ತಿಳಿಸಿದ್ದು, ಅದರಂತೆ ಜುಲೈ 2019 ರ ವರ್ಗಾವಣೆಗೆ ಸಂಬಂಧಿಸಿದ ಪ್ರಸ್ತಾವಗಳ ಮೇಲೆ ಅನುಮೋದನೆಗೊಂಡು, ಜಾರಿಯಾಗದೆ ಇರುವ ಆದೇಶಗಳನ್ನು ಮುಂದಿನ ಆದೇಶದವರೆಗೆ ಜಾರಿ ಮಾಡದಂತೆ ಹಾಗೂ ಈಗಾಗಲೇ ಹೊರಡಿಸಿರುವ ಆದರೆ ಚಾಲನೆಗೊಳ್ಳದಿರುವ ವರ್ಗಾವಣೆ ಸಂಬಂಧಿತ ಪ್ರಸ್ತಾವಗಳ ಮೇಲಿನ ಆದೇಶಗಳನ್ನು ಮುಂದಿನ ಆದೇಶದವರೆಗೆ ಚಾಲನೆಗೊಳಿಸದಂತೆ ಸರಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ.

ಈ ಆದೇಶದ ಹಿನ್ನೆಲೆಯಲ್ಲಿ ಇದೀಗ ಕುಮಾರಸ್ವಾಮಿ ಮುಖ್ಯಮಂತ್ರಿ ಅವಧಿಯ ಕಡೆ ದಿನಗಳಲ್ಲಿ ಜಾರಿಗೊಳಿಸಿದ್ದ ಯೋಜನೆಗಳಿಗೆ ಬ್ರೇಕ್ ಬೀಳಲಿದೆ. ಜತೆಗೆ ಸಿಎಂ ಸಹೋದರ, ಸಚಿವ ರೇವಣ್ಣ, ತರಾತುರಿಯಲ್ಲಿ ಒಂದೇ ಇಲಾಖೆಯಲ್ಲಿ ನೂರಾರು ಸಂಖ್ಯೆಯಲ್ಲಿ ಮಾಡಿದ್ದ ಬಡ್ತಿ ವರ್ಗಾವಣೆಗೂ ಕುತ್ತು ಬಂದಂತಾಗಿದೆ.

key words : care taker CM orders should be stopped -Chief secretary Vijay Bhasker.

All orders relating to work launched in July by the care taker CM should be stopped till they are looked into by the chief secretary or secretaries .Going ahead all transfer orders that were signed but not implemented cannot be acted upon till further orders. By the order of Chief secretary Vijay Bhasker.