ಕರ್ತವ್ಯಕ್ಕೆ ಹಾಜರಾಗುವವರಿಗೆ ಅಡ್ಡಿಪಡಿಸುವವರ ವಿರುದ್ಧ ಕೇಸ್-ಡಿಸಿಎಂ ಲಕ್ಷ್ಮಣ್ ಸವದಿ ಎಚ್ಚರಿಕೆ….

ಬೀದರ್,ಏಪ್ರಿಲ್,14,2021(www.justkannada.in):  6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ಹೂಡಿರುವ ಅನಿರ್ಧಿಷ್ಟಾವಧಿ ಮುಷ್ಕರ 8ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಕರ್ತವ್ಯಕ್ಕೆ ಹಾಜರಾಗುವವರಿಗೆ ಅಡ್ಡಿಪಡಿಸುವವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಲಾಗುವುದು ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ.CM,B.S.Y,Statement,atrocious,Extreme,Kodihalli Chandrasekhar

ಈ ಕುರಿತು ಇಂದು ಬೀದರ್ ನ ಹುಮ್ನಾಬಾದ್ ನಲ್ಲಿ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,  ಹಬ್ಬದ ಬಳಿಕ ಮತ್ತಷ್ಟು ಚಾಲಕರು ಕರ್ತವ್ಯಕ್ಕೆ ಬಂದಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವವರಿಗೆ ಅಡ್ಡಿಪಡಿಸುವ ಕೆಲಸವಾಗುತ್ತಿದೆ. ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತದೆ ಎಂದು ಹೇಳಿದರು.Case- against - disrupt -attendance – duty-DCM -Laxman Sawadi -warns.

ಸಾರಿಗೆ ನೌಕರರ ಕುಟುಂಬಸ್ಥರಿಂದ ಪ್ರತಿಭಟನೆ ಕುರಿತು ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಈ ಮೂಲಕ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ. ಇದು ಸಾಧ್ಯವಿಲ್ಲ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.

Key words: Case- against – disrupt -attendance – duty-DCM -Laxman Sawadi -warns.