ಒಡಿಶಾ ರೈಲು ಅಪಘಾತಕ್ಕೆ ಕಾರಣ ಪತ್ತೆ: ಕೇಂದ್ರ ಸಚಿವ ಮಾಹಿತಿ

Promotion

ಬೆಂಗಳೂರು, ಜೂನ್ 04, 2023 (www.justkannada.in): ಒಡಿಶಾದ ಬಾಲಸೋರ್ ರೈಲು ಅಪಘಾತ ಪ್ರಕರಣಕ್ಕೆ ಮೂಲಕ ಕಾರಣಗಳ ಪತ್ತೆ ಮಾಡಲಾಗಿದೆ.

ಈ ಕುರಿತು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ. ರೈಲು ಅಪಘಾತ ಪ್ರಕರಣಕ್ಕೆ ಮೂಲಕ ಕಾರಣಗಳ ಪತ್ತೆ ಮಾಡಲಾಗಿದೆ.  ಅದಕ್ಕೆ ಕಾರಣರಾದವರನ್ನೂ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಪಘಾತದ ಸ್ಥಳದಲ್ಲಿ ಮೇಲ್ವಿಚಾರಣೆ ನಡೆಸಿ ಮಾತನಾಡಿದ ಅವರು, ಹೌರಾ-ಚೆನ್ನೈ ರೈಲು ಮಾರ್ಗದ ದುರಸ್ತಿ ಕಾರ್ಯ ಬುಧವಾರ ಸಂಜೆಯ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ತನಿಖಾ ವರದಿ ಬದಿದ್ದು, ಘಟನೆಗೆ ಮೂಲಕ ಕಾರಣ ಹಾಗೂ ಕಾರಣಕರ್ತರನ್ನು ಗುರ್ತಿಸಲಾಗಿದೆ. ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ನಲ್ಲಿನ ಬದಲಾವಣೆಯಿಂದ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ರೈಲು ಮಾರ್ಗಗಳ ಪುನಃಸ್ಥಾಪನೆಯತ್ತ ಗಮನ ಹರಿಸಲಾಗಿದೆ ಮತ್ತು ಬುಧವಾರ ಬೆಳಿಗ್ಗೆ ಈ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಗಳಿವೆ ಎಂದು ತಿಳಿಸಿದ್ದಾರೆ.