ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ: ತಮಿಳುನಾಡಿಗೆ 5 ಸಾವಿರ ಕ್ಯೂ. ನೀರು ಬಿಡುವಂತೆ ಆದೇಶ

Promotion

ಬೆಂಗಳೂರು, ಸೆಪ್ಟೆಂಬರ್ 18, 2023 (www.justkannada.in): ಇಂದು ದೆಹಲಿಯ ಸಿಡಬ್ಲ್ಯೂಎಮ್‌ಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂ ಸೆಟ್ ನೀರು ಹರಿಸುವಂತೆ ಆದೇಶಿಸಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಸಿಡಬ್ಲ್ಯೂಎಮ್‌ಎ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಳಿಕ ಈ ಆದೇಶ ನೀಡಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸುವಂತೆ ಆದೇಶಿಸಿದೆ. ಕೇವಲ 3 ಸಾವಿರ ಕ್ಯೂಸೆಕ್ ನೀರು ಬಿಡುವುದರಿಂದ ಭತ್ತದ ಬೆಳೆ ಹಾಳಾಗುತ್ತವೆ ಅದರಿಂದ ಹೆಚ್ಚುವರಿ ನೀರು ಬಿಡುವಂತೆ ತಮಿಳುನಾಡು ಮನವಿ ಸಲ್ಲಿಸಿತ್ತು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆಗೆ ಕರ್ನಾಟಕಕ್ಕೆ ಸೂಚಿಸಲಾಗಿದೆ. ತಮಿಳುನಾಡಿಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ಮಂಡ್ಯದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ.