ಬಿಜೆಪಿ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು- ಸಿಬಿಐ ದಾಳಿ ಕುರಿತು ಸಂಸದ ಡಿ.ಕೆ ಸುರೇಶ್ ಟ್ವೀಟ್

ಬೆಂಗಳೂರು,ಅಕ್ಟೋಬರ್ 5,2020(www.justkannada.in):  ಇಂದು ಬೆಳ್ಳಂಬೆಳಿಗ್ಗೆಯೇ ತಮ್ಮ ನಿವಾಸ ಮತ್ತು ಅಣ್ಣ ಡಿ.ಕೆ ಶಿವಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ ಎಂದಿದ್ದಾರೆ.

ಹಾಗೆಯೇ ಬಿಜೆಪಿಗೆ ಟಾಂಗ್ ನೀಡಿರುವ ಡಿ.ಕೆ ಸುರೇಶ್, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.cbi-attack-dk-shivakumar-mp-dk-suresh-tweet

ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದು ಡಿ.ಕೆ ಸುರೇಶ್ ಟ್ವೀಟ್ ಮಾಡಿದ್ದಾರೆ.

Key words: CBI-Attack-DK Shivakumar- MP-DK suresh- tweet