ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ರಾಜಕೀಯ ಪ್ರೇರಿತ-  ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

Promotion

ಚಿಕ್ಕಬಳ್ಳಾಪುರ,ಅಕ್ಟೋಬರ್,19,2023(www.justkannada.in):  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾದದ್ದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ತನಿಖೆಗೆ ಹೈಕೋರ್ಟ್ ಅನುಮತಿ ನೀಡಿರುವ  ವಿಚಾರಕ್ಕೆ ಸಂಬಂಧಿಸಿದಂತೆ  ಮಾತನಾಡಿದ ವೀರಪ್ಪ ಮೊಯ್ಲಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾಗಿದೆ. ಕಾಂಗ್ರೆಸ್ ಪಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಇರುತ್ತೆ. ಬಿಜೆಪಿ ವಿರೋಧಿಸುವವರ ಮೇಲೆ ಸಿಬಿಐ, ಇಡಿ ದಾಳಿ ಸಾಮಾನ್ಯವಾಗಿದೆ. ಸಿಬಿಐ ತನಿಖೆಯನ್ನು ಡಿಕೆ ಸಮರ್ಥವಾಗಿ ಎದುರಿಸುತ್ತಾರೆ ಎಂದು ತಿಳಿಸಿದರು.

Key words: CBI -investigation -against -DK Shivakumar – politically motivated- former CM -Veerappa Moily