ಸಿಬಿಎಸ್ ಇ 12ನೇ ತರಗತಿ ಪರೀಕ್ಷೆ ಮುಂದೂಡಿಕೆ: 10ನೇ ತರಗತಿ ಪರೀಕ್ಷೆ ರದ್ಧು….

ನವದೆಹಲಿ,ಏಪ್ರಿಲ್,14,2021(www.justkannada.in):  ದೇಶದಲ್ಲಿ ಕೊರೋನಾ ಸೋಂಕು  ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಹಾಗೆಯೇ 10ನೇ ತರಗತಿ ಸಿಬಿಎಸ್ ಇ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 4ರಿಂದ ಜೂನ್ 14ರವರೆಗೆ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಗಳು ನಡೆಯಬೇಕಿತ್ತು. ಜೂ. 1ರವರೆಗೆ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಆ ಬಳಿಕ ಪರೀಕ್ಷೆ ದಿನಾಂಕ ನಿರ್ಧರಿಸಿ 15 ದಿನ ಮುನ್ನವೇ ತಿಳಿಸಲು ನಿರ್ಧಾರ ಮಾಡಲಾಗಿದೆ. ಹಾಗೆಯೇ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.cbse-12th-class-exam-postponement-10th-class-examination-canceled

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲಯದ ಇತರೆ ಹಿರಿಯ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Key words: CBSE -12th Class -Exam –Postponement-  10th Class –Examination- canceled.