ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಭವಿಷ್ಯ ಇಂದು ನಿರ್ಧಾರ

Promotion

ಬೆಂಗಳೂರು, ಮೇ 23, 2021 (www.justkannada.in): ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಪರೀಕ್ಷೆ ನಡೆಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ದೇಶದಲ್ಲಿ ಕೋವಿಡ್‌-19 ಪ್ರಕರಣಗಳು ಏರುಗತಿಯಲ್ಲಿದ್ದ ಕಾರಣ ಏಪ್ರಿಲ್‌ 14ರಂದು ಶಿಕ್ಷಣ ಸಚಿವಾಲಯವು 10ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು.

ಕೇಂದ್ರ ಸಚಿವರಾದ ರಮೇಶ್ ಪೋಖ್ರಿಯಾಲ್‌, ಸ್ಮೃತಿ ಇರಾನಿ, ಪ್ರಕಾಶ್‌ ಜಾವಡೇಕರ್‌, ರಾಜ್ಯಗಳ ಶಿಕ್ಷಣ ಸಚಿವರು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ.