‘ಸಿಡಿ’ಯನ್ನು ನಿಮ್ಮ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ?- ಸರಣಿ ಟ್ವಿಟ್ ಮಾಡಿ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

Promotion

ಬೆಂಗಳೂರು,ಜ,11,2020(www.justkannada.in): ಮಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಕುರಿತು ಟೀಕಿಸಿದ್ದ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವಿಟ್ ಮಾಡಿ ತಿರುಗೇಟು ನೀಡಿದ್ದಾರೆ.

ಕಳೆದ ನಿನ್ನೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಮಂಗಳೂರು ಗಲಭೆಯ  ಕುರಿತ 35 ವಿಡಿಯೋ ಬಿಡುಗಡೆ ಮಾಡಿದ್ದರು. ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ  ವಿಡಿಯೋ ಕುರಿತು ಸಂಸದೆ ಶೋಭಾ ಕರಂಧ್ಲಾಜೆ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಲಕ್ಷ್ಮಣ್ ಸವಿದಿ ಹಲವು ಬಿಜೆಪಿ ಮುಖಂಡರು ಟೀಕಿಸಿದ್ದರು.

ಈ ಕುರಿತಂತೆ ಬಿಜೆಪಿಯ ನಾಯಕರು ನೀಡಿರುವ ಪ್ರತಿಕ್ರಿಯೆಗಳಿಗೆ ಸರಣಿ ಟ್ವಿಟ್ ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಈ ಕೆಳಗಿನಂತೆ ಕುಟುಕಿದ್ದಾರೆ.

ಸಿಎಂ ಬಿಎಸ್ ವೈ ಅವರ ಕಟ್ ಅಂಡ್ ಪೇಸ್ಟ್ ಹೇಳಿಕೆ ಕುರಿತು ಟ್ವಿಟ್ ಮಾಡಿರುವ ಹೆಚ್.ಡಿಕೆ, “ಅದಕ್ಕೆಲ್ಲಾ ಅರ್ಥ ಇದ್ಯೇನ್ರೀ, ಅದೆಲ್ಲಾ ಕಟ್ ಆಂಡ್ ಪೇಸ್ಟ್ ವೀಡಿಯೋ” ಎಂದಿದ್ದಾರೆ ಸಿಎಂ. ಸಿ.ಡಿ. ಬಿಡುಗಡೆ ವೇಳೆಯೇ ಇಂತಹ ಬಾಲಿಶತನದ ಪ್ರತಿಕ್ರಿಯೆ ಬಿಟ್ಟು ಮತ್ತೇನು ಬಿಜೆಪಿ ನಾಯಕರಿಂದ ನಿರೀಕ್ಷಿಸಲು ಸಾಧ್ಯ? ಎಂದಿದ್ದೆ. ಅದನ್ನು ರುಜುವಾತುಪಡಿಸಿದಿರಿ. ಸಿ.ಡಿ.ಯ ಸತ್ಯಾಸತ್ಯತೆ ಬಗ್ಗೆ ತಜ್ಞರಿಂದ ವರದಿ ತರಿಸಿಕೊಳ್ಳುವ ಧೈರ್ಯ ನಿಮಗಿದೆಯೇ? ಅದಕ್ಕೂ ಮಿಗಿಲಾಗಿ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಿ. ನಾನು ಬಿಡುಗಡೆ ಮಾಡಿರುವ ‘ಸಿಡಿ’ಯನ್ನು ನೀವು ಸೃಷ್ಟಿಸಿಕೊಂಡಂತೆ ‘ಕಟ್ ಅಂಡ್ ಪೇಸ್ಟ್’ ಬಿಜೆಪಿ ಸರ್ಕಾರ ಎಂದುಕೊಂಡಿರಾ? ಎಂದು ಟಾಂಗ್ ನೀಡಿದ್ದಾರೆ.

ಇದೇ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ಕುರಿತು ಟ್ವಿಟ್ ಮಾಡಿ ಕುಟುಕಿರುವ ಮಾಜಿ ಸಿಎಂ ಹೆಚ್.ಡಿಕೆ, ಮೆಕ್ಕಾಕ್ಕೆ ಹೋದಾಗ ಮುಸಲ್ಮಾನರು ಸೈತಾನನಿಗೆ ಕಲ್ಲು ಹೊಡೆಯುತ್ತಾರೆ. ಪೊಲೀಸರ ಮೇಲೆ ಕಲ್ಲು ತೂರಲು ಅವರೇನು ಸೈತಾನರೇ ಎಂದು ಸೋದರಿ ಶೋಭಾ ಪ್ರಶ್ನೆ ಮಾಡಿದ್ದಾರೆ. ಹಾಗಾದರೆ ಪೊಲೀಸರು ಕಲ್ಲು ತೂರಾಟ ಮಾಡಿದರಲ್ಲ… ಹೋರಾಟಗಾರರೇನು ಸೈತಾನರೇ? ಉತ್ತರಿಸುವಿರಾ ಶೋಭಾ ಅವರೇ? ಎಂದು ಪ್ರಶ್ನಿಸಿದ್ದಾರೆ.CD -cut and paste- BJP government-Former CM HD –Kumaraswamy- tweet

ಸಿ.ಡಿ.ಗಳು ಬಿಜೆಪಿಯ ಸ್ವತ್ತು…

ಹಾಗೆಯೇ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರಿಗೆ ತಿರುಗೇಟು ನೀಡಿರುವ ಹೆಚ್.ಡಿ ಕುಮಾರಸ್ವಾಮಿ, ಗಲಭೆಯ ಸಿ.ಡಿ. ಬಿಡುಗಡೆ ಮಾಡಿದ್ದಕ್ಕೆ ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಸಿ.ಡಿ. ಹಲವರಿಗೆ ರಾಜಕೀಯ ಅಸ್ತಿತ್ವದ ಸ್ವತ್ತು ಎಂದಿದ್ದಾರೆ. ಬಿಜೆಪಿಯಲ್ಲಿ ಸದ್ದು ಮಾಡಿದ ಸಿ.ಡಿ.ಗಳ ಸಂಖ್ಯೆ ಒಂದೆರಡೇ? ಎಲ್ಲ ಸಿ.ಡಿ.ಗಳು ಬಯಲಾದರೆ ಬಿಜೆಪಿಗರು ಬೆತ್ತಲಾಗುತ್ತಾರಷ್ಟೇ. ಸಿ.ಡಿ.ಗಳು ಬಿಜೆಪಿಯ ಸ್ವತ್ತು. ಸಿಡಿ ಬಗ್ಗೆ ಮಾತಾಡುವಾಗ ಸದಾನಂದಗೌಡ ಎಚ್ಚರವಾಗಿರಲಿ ಎಂದು ಲೇವಡಿ ಮಾಡಿದ್ದಾರೆ.

Key words: CD -cut and paste- BJP government-Former CM HD –Kumaraswamy- tweet