ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ‘ಗೋಮಯ’ ಹಣತೆ ಬಳಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ…

ಬೆಂಗಳೂರು,ಅಕ್ಟೋಬರ್,24,2020(www.justkannada.in): ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿ ದೀಪಾವಳಿಯನ್ನಾಗಿ ಆಚರಿಸಲು ಒತ್ತು ನೀಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಈ ಬಾರಿಯ ದೀಪಾವಳಿಯನ್ನು ಕಾಮಧೇನು(ಗೋಮಯ) ದೀಪಾವಳಿಯನ್ನಾಗಿಸಲು ಕರೆ ನೀಡಿದ್ದಾರೆ. ರಾಸಾಯನಿಕಯುಕ್ತ ಹಣತೆ,ಅಪಾಯಕಾರಿ ಪಟಾಕಿಗಳನ್ನು ಬಳಸುವುದನ್ನು ಬಿಟ್ಟು ಮನಸಿಗೆ ಮುದ ನೀಡುವ ಹಾನಿಕಾರಕವಲ್ಲದ ಗೋಮಯ ದೀಪಗಳನ್ನು ಬಳಸಲು ಕರೆ ನೀಡಿದ್ದಾರೆ.jk-logo-justkannada-logo

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ  ರೈತರ ಸ್ವಾವಲಂಬನೆ ಹಾಗೂ ಆದಾಯ ದ್ವಿಗುಣ ಕಾರ್ಯಯೋಜನೆಯನ್ನು ಆತ್ಮ ನಿರ್ಭರ್ ಭಾರತದ ಸಂಕಲ್ಪವನ್ನು ಸಾಕಾರ ಗೊಳಿಸಲು ಕೇಂದ್ರ ಪಶು ಸಂಗೋಪನಾ ಸಚಿವಾಲಯದ ರಾಷ್ಟ್ರೀಯ ಕಾಮಧೇನು ಆಯೋಗದಿಂದ ಪ್ರಾಯೋಜಿತವಾದ ಸಗಣಿಯಿಂದ ತಯಾರಿಸಿದ ಗೋಮಯ ಹಣತೆಯನ್ನು ಈ ದೀಪಾವಳಿಯ ಸಂದರ್ಭದಲ್ಲಿ ದೇಶದಾದ್ಯಂತ ಉರಿಸುವ ಯೋಜನೆ ರೂಪಿಸಿದೆ.

ಈ ನಿಟ್ಟಿನಲ್ಲಿ ರಾಷ್ಟ್ರೀಯ ಕಾಮಧೇನು ಆಯೋಗ,ರಾಷ್ಟ್ರೋತ್ಥಾನ ಗೋಶಾಲೆ, ಗೋಸೇವಾ ಗತಿವಿಧಿ ಹಾಗೂ ಪ್ರಾಣಿ ಕಲ್ಯಾಣ ಮಂಡಳಿ ಈ ಬಾರಿಯ ದೀಪಾವಳಿಯನ್ನು ಪರಿಸರ ಸ್ನೇಹಿ ಗೋಮಯ ದೀಪಗಳಿಂದ ಆಚರಿಸಬೇಕೆಂದು ಯೋಜ‌ನೆ ರೂಪಿಸಿದ್ದು, ದೇಶದಲ್ಲಿ 33 ಕೋಟಿ ದೀಪಗಳನ್ನು ರಾಜ್ಯದಲ್ಲಿ 3ಕೋಟಿ ಗೋಮಯ ದೀಪಗಳನ್ನು ಬಳಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವ ಬಿ.ಸಿ ಪಾಟೀಲ್ ತಿಳಿಸಿದರು.celebrate-eco-friendly-dipavali-agriculture-minister-bc-patil

ಈ ಗೋಮಯ ದೀಪಗಳನ್ನು ಬಳಸುವುದರಿಂದ ರೈತರ ಬೆನ್ನೆಲುಬಾದ ಭಾರತೀಯ ದೇಶಿ ಗೋತಳಿಯ ಉಳಿವಿಗೆ ಪ್ರಯತ್ನ ಮಾಡುವುದರ ಜೊತೆಗೆ ಆರೋಗ್ಯದ ಹಿತದೃಷ್ಟಿಯಿಂದಲೂ ಉತ್ತಮವಾಗಿದೆ. ಅಲ್ಲದೇ ಇದರಿಂದ ದೇಶೀಯ ದೀಪಗಳಿಗೆ ಉತ್ತೇಜನ ತಯಾರಿಕರಿಗೆ ಪ್ರೋತ್ಸಾಹ ದೊರೆಯುವಂತಾಗುತ್ತದೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ.

Key words: Celebrate -Eco-friendly- Dipavali- Agriculture Minister -BC Patil