ರಾಜ್ಯ ಸರ್ಕಾರಕ್ಕೆ ಕೇಂದ್ರ ಸಾವಿರಾರು ಕೋಟಿ ಅನುದಾನ ನೀಡಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

Promotion

ಹುಬ್ಬಳ್ಳಿ,ಫೆಬ್ರವರಿ,28,2022(www.justkannada.in): ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸಾವಿರಾರು ಕೋಟಿ ಅನುದಾನ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಸರ್ಕಾರಕ್ಕೆ ಕೇಂದ್ರ ಸಾವಿರಾರು ಕೋಟಿ ಅನುದಾನ ನೀಡಿದೆ. ರಸ್ತೆಗಳ ನಿರ್ಮಾಣಕ್ಕೆ ಹೆಚ್ಚು ಅನುದಾನ  ನೀಡಿದೆ. ಬೊಮ್ಮಾಯಿ ಒತ್ತಾಯ ಮಾಡಿದ ಹಿನ್ನೆಲೆ ಹೆಚ್ಚು ಅನುದಾನ ನೀಡಲಾಗಿದೆ ಎಂದರು.

ಇಂದು ಬೆಳಗಾವಿ ಜಿಲ್ಲೆಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಆಗಮಿಸಲಿದ್ದಾರೆ. ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾ‌ನ ನಿಲ್ದಾಣಕ್ಕೆ ನಿತಿನ್ ಗಡ್ಕರಿ ಬಂದಿಳಿಯಲಿದ್ದಾರೆ. ಹೀಗಾಗಿ ನಿತಿನ್ ಗಡ್ಕರಿ ಆಗಮನಕ್ಕೂ ಮು‌ನ್ನ ಬೆಳಗಾವಿಗೆ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಲಿದ್ದಾರೆ.

Key words: Center- thousands – crores – state government-Prahlad Joshi.