“ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ”

ಬೆಳಗಾವಿ,ಜನವರಿ,17,2021(www.justkannada.in) :  ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರ ನಿವಾಸ “ಸ್ಫೂರ್ತಿ” ಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದರು.jk-logo-justkannada-mysore

ವಿಶ್ವೇಶ್ವರ ನಗರದ ಸಂಪಿಗೆ ರಸ್ತೆಯಲ್ಲಿರುವ ದಿ.ಸುರೇಶ ಅಂಗಡಿಯವರ ಭಾವಚಿತ್ರಕ್ಕೆ ನಮನಗಳನ್ನು ಅರ್ಪಿಸಿದರು.

ಬಳಿಕ ಮಾತನಾಡಿದ ಅವರು, ಸುರೇಶ ಅಂಗಡಿಯವರು ಉತ್ತಮ ವ್ಯಕ್ತಿತ್ವ ಹೊಂದಿದ್ದರು. ಅವರು ಕೋವಿಡ್ ನಿಂದ ಬಳಲುತ್ತಿರುವಾಗ ತಾವೂ ಸಹ ಅದೇ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದನ್ನು ನೆನೆದರು. ಅವರ ನಿಧನ ದೊಡ್ಡ ನಷ್ಟ ಉಂಟುಮಾಡಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ದಿ.ಸುರೇಶ ಅಂಗಡಿಯವರ ಧರ್ಮಪತ್ನಿ ಮಂಗಲ್ ಅಂಗಡಿ, ಪುತ್ರಿಯರಾದ ಸ್ಫೂರ್ತಿ, ಶ್ರದ್ಧಾ, ಅಳಿಯಂದಿರಾದ ಡಾ.ರಾಹುಲ್ ಪಾಟೀಲ, ಸಂಕಲ್ಪ ಶೆಟ್ಟರ್, ಕಿರಿಯ ಸಹೋದರ ಮೋಹನ ಚ.ಅಂಗಡಿಯವರಿಗೆ  ಸಾಂತ್ವನ ಹೇಳಿದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ದಿ‌.ಸುರೇಶ ಅಂಗಡಿಯವರ ತಾಯಿ ಸೋಮವ್ವ ಚನ್ನಬಸಪ್ಪ ಅಂಗಡಿಯವರು ನಾಗೇರಹಾಳದ (ಕೊಂಡಸಕೊಪ್ಪ) ನಿವಾಸದಲ್ಲಿದ್ದರು‌.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್,ರಾಜ್ಯ ಅಧ್ಯಕ್ಷ ನಳೀನಕುಮಾರ್ ಕಟೀಲ, ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ್ , ಶಾಸಕ ಅನಿಲ ಬೆನಕೆ ಹಾಜರಿದದರು.

ಬಿಗಿಭದ್ರತೆ  ಕುಟುಂಬ ವರ್ಗದ ಸದಸ್ಯರಿಗೆ ಮಾತ್ರ ಅವಕಾಶCenter-Home Minister-Amit Shah-meets-Minister - Suresh-home

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೆ ತಲುಪುವ ಎಲ್ಲಾ ಮಾರ್ಗಗಳಲ್ಲಿ ತೀವ್ರ ಬಿಗಿ,ಭದ್ರತೆ ಏರ್ಪಡಿಸಲಾಗಿತ್ತು.  ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆಹಾರ ಸುರಕ್ಷತಾ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಉಪಹಾರ ಸಿದ್ಧಪಡಿಸಲಾಗಿತ್ತು.

ದಿ.ಸುರೇಶ ಅಂಗಡಿಯವರ ಆಪ್ತ ಸಿಬ್ಬಂದಿ ವರ್ಗದ ರಾಜು ಜೋಷಿ,ಶ್ರೀಕಾಂತ ಕಡಕೋಳ,ಸಂತೋಷ ತುಬಚಿ, ಶಿವಲಿಂಗಯ್ಯ ಅಲ್ಲಯ್ಯನವರಮಠಮತ್ತಿತರ ಕೆಲವೇ ಜನರಿಗೆ ಭೇಟಿ ಸಂದರ್ಭದಲ್ಲಿ ಅವಕಾಶ ಕಲ್ಪಿಸಲಾಗಿತ್ತು.

key words : Center-Home Minister-Amit Shah-meets-Minister – Suresh-home