ಕೇಂದ್ರ ಬಜೆಟ್: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ: 5ಜಿ ಅಪ್ಲಿಕೇಶನ್ ಅಭಿವೃದ್ಧಿಗೆ ನೂರು ಲ್ಯಾಬ್.

Promotion

ನವದೆಹಲಿ,ಫೆಬ್ರವರಿ,1,2023(www.justkannada.in): 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ, ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ ರೂಪಿಸಲು ಕೇಂದ್ರ ಬಜೆಟ್ ನಲ್ಲಿ  ಘೋಷಣೆ ಮಾಡಲಾಗಿದೆ.

ಬಜೆಟ್ ಮಂಡನೆ ಮಾಡುತ್ತಾ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮ. ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುತ್ತಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಐಸಿಎಂಆರ್ ಲ್ಯಾಬ್ ಗಳು. ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಸಾರ್ವಜನಿಕ ಗ್ರಂಥಾಲಯಗಳಲ್ಲಿ ರೋಗಗಳ ಬಗ್ಗೆ ಮಾಹಿತಿ ನೀಡುವುದು. ಪ್ರಾದೇಶಿಕ ಭಾಷೆಯಲ್ಲಿ ಸಾಂಕ್ರಾಮಿಕ ರೋಗಗಳ ಮಾಹಿತಿ ನೀಡಲು ಕ್ರಮ ಎಂದು ತಿಳಿಸಿದರು.

ಹಾಗೆಯೇ  IITಗೆ 5 ವರ್ಷಗಳ ಕಾಲ ಅಧ್ಯಯನಕ್ಕೆ ಅನುದಾನ. 5ಜಿ ಅಪ್ಲಿಕೇಶನ್ ಅಭಿವೃದ್ಧಿಗೆ ನೂರು ಲ್ಯಾಬ್ ಸ್ಥಾಪನೆ. ಏಕಲವ್ಯ ಮಾದರಿ ವಸತಿ ಶಾಲೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಮೀನುಗಾರಿಕೆಗೆ 6 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದರು.

Key words: Central Budget- Establishment – 157- new Nursing -Colleges