ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ: ಹೋರಾಟ ಹಿಂಪಡೆಯುವ ಬಗ್ಗೆ ನಾಳೆ ನಿರ್ಧಾರ ಸಾಧ್ಯತೆ.

kannada t-shirts

ನವದೆಹಲಿ,ಡಿಸೆಂಬರ್,7,2021(www.justkannada.in) ಮೂರು ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಬಳಿಕವೂ ರೈತರು ನಡೆಸುತ್ತಿದ್ದ ಹೋರಾಟವನ್ನ ನಾಳೆ ಅಂತ್ಯಗೊಳಿಸುವ ಸಾಧ್ಯತೆ ಇದೆ. ಹೌದು,  ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಪ್ರತಿಭಟನಾ ನಿರತ ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಲಿಖಿತವಾಗಿ ಒಪ್ಪಿಗೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ಹೋರಾಟ ಅಂತ್ಯವಾಗುವ ಸಾಧ್ಯತೆ ಇದೆ.

ರೈತ ಸಂಘಗಳಿಗೆ ಬರೆದ ಪತ್ರದಲ್ಲಿ ಸರ್ಕಾರವು ಎಂಎಸ್‌ಪಿ ಕುರಿತು ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಬೆಳೆ ತ್ಯಾಜ್ಯ ಸುಡುವಿಕೆ ಸೇರಿದಂತೆ ರೈತರ ಮೇಲಿನ ಪ್ರಕರಣಗಳನ್ನು ಕೈಬಿಡಲು ಕೇಂದ್ರ ಸರ್ಕಾರ ಒಪ್ಪಿದೆ ಎನ್ನಲಾಗಿದೆ. ಈ ಪ್ರಸ್ತಾಪವನ್ನು ಒಪ್ಪಿಕೊಂಡರೆ, ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದಾದ್ಯಂತ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಸಾಧ್ಯತೆ ಇದೆ.

ನಾಳೆ 2 ಗಂಟೆಗೆ ರೈತಮುಖಂಡರು ಸಭೆ ನಡೆಸಲಿದ್ದು ಹೋರಾಟ ಹಿಂಪಡೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾದ್ಯತೆ ಇದೆ. ಈ ಬಗ್ಗೆ ಮಾತನಾಡಿರುವ ರೈತಮುಖಂಡ ರಾಕೇಶ್ ಟಿಕಾಯತ್,  ರೈತರ ಮೇಲಿನ ಕೇಸ್ ವಾಪಸ್ ಪಡೆಯಿರಿ. ಲಿಖಿತ ಭರವಸೆಯನ್ನ ನೀಡಿದರೇ ಒಪ್ಪುವುದಿಲ್ಲ. ಮೊದಲು ರೈತರ ಬೇಡಿಕೆಗಳನ್ನ ಈಡೇರಿಸಿ ಎಂದಿದ್ದಾರೆ.

Key words: central government – agreed – fulfill – demand – farmers-Decision – withdrawal – fight

website developers in mysore