ಮುಂದಿನ 10ರಿಂದ 12 ದಿನಗಳಲ್ಲಿ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ….

ನವದೆಹಲಿ,ಮೇ,18,2021(www.justkannada.in):  ಕೊರೋನಾ ಸೋಂಕಿನ 2ನೇ ಅಲೆ ಬಳಿಕ, 3ನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಮುಂದಿನ  10ರಿಂದ 12 ದಿನಗಳಲ್ಲಿ ಕೇಂದ್ರ ಸರ್ಕಾರ ತನ್ನ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ.jk

ಕೊರೋನಾ ಮೂರನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂದು  ತಜ್ಞರು ಅಭಿಪ್ರಾಯ ಪಟ್ಟಿದ್ದು ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವಕೇಂದ್ರ ಸರ್ಕಾರ, 2 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲು ಚಿಂತನೆ ನಡೆಸಿದೆ.Central government- decision – vaccinate- children -next -10 to 12 days

ಆರಂಭದಲ್ಲಿ ಮಕ್ಕಳಿಗೆ ಪ್ರಾಯೋಗಿಕವಾಗಿ ಲಸಿಕೆ ನೀಡಲಾಗುತ್ತದೆ. ಈಗಾಗಲೇ 18 ರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ ನೀಡಲು ಅಭಿಯಾನ ನಡೆಸಲಾಗುತ್ತಿದೆ. ಇದೀಗ ಮಕ್ಕಳಿಗೂ ಲಸಿಕೆ ನೀಡಲು ಕೇಂದ್ರ ಮುಂದಾಗಿದೆ.

Key words: Central government- decision – vaccinate- children -next -10 to 12 days