ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವ ಉದ್ದೇಶ ಕೇಂದ್ರ ಸರ್ಕಾರಕ್ಕಿಲ್ಲ- ನಳೀನ್ ಕುಮಾರ್ ಕಟೀಲ್.

Promotion

ಕಲ್ಬುರ್ಗಿ,ಜೂನ್,23,2023(www.justkannada.in): ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವ ಉದ್ದೇಶ ಕೇಂದ್ರಕ್ಕೆ ಇಲ್ಲ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿಲ್ಲ, ಹಿಂದೆಯೂ ಆಗಿದ್ದರು. ಈ ಹಿಂದೆ ಆಗದಿದ್ದ ಸಮಸ್ಯೆ ಈಗ ಯಾಕೆ ಆಗುತ್ತಿದೆ. ಕೇಂದ್ರ ಅಕ್ಕಿ ಕೊಟ್ಟಾಗ ಸಿದ್ದರಾಮಯ್ಯ ತಮ್ಮ ಫೋಟೋ ಹಾಕಿದ್ದರು. ಸಿದ್ದರಾಮಯ್ಯ ಕೇಂದ್ರದ್ದು ಸೇರಿ 10 ಕೆಜಿ ಕೊಡ್ತೇವೆ ಅಂತಾ ಹೇಳಿಲ್ಲ. ತಲಾ 10 ಕೆಜಿ ಅಕ್ಕಿ ಕೊಡಬೇಕೆಂದು ಸರ್ಕಾರಕ್ಕೆ ಆಗ್ರಹ ಮಾಡ್ತೇವೆ ಎಂದು ಹೇಳಿದರು.

ನಿನ್ನೆ ಸಿಎಂ ಸಿದ್ದರಾಮಯ್ಯ ಅಮಿತ್ ಶಾರನ್ನು ಭೇಟಿ ಮಾಡಿ ಬಂದಿದ್ದಾರೆ. ರಾಜ್ಯದಲ್ಲಿ ವಿದ್ಯುತ್​ ದರ ಏರಿಕೆ ಮಾಡಿದ್ದು ಯಾರು…? ಭಾಗ್ಯಗಳನ್ನು ನೀಡಲು ಆಗದೆ ಅವರೇ ಸಮಸ್ಯೆಗೆ ಸಿಲುಕುತ್ತಾರೆ. ಸರ್ಕಾರ ನಡೆಸಲು ಕಾಂಗ್ರೆಸ್ ವಿಫಲವಾಗಿದೆ  ಎಂದು ಕಟೀಲ್ ವಾಗ್ದಾಳಿ ನಡೆಸಿದರು,

Key words: central government – no intention – politicizing – rice issue – Naleen Kumar Kateel.