ಜೂನ್ 30ರವರೆಗೆ ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ ಹಿನ್ನೆಲೆ: ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು ಹೀಗೆ.

ಬೆಂಗಳೂರು,ಮೇ,29,2021(www.justkannada.in):  ಕೊರೋನಾ ನಿಯಂತ್ರಣಕ್ಕಾಗಿ ಜೂನ್ 30ರವರೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆ, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.jk

ಈ ಬಗ್ಗೆ ಇಂದು ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಜೂನ 30ರವರೆಗೆ ಕಠಿಣ ಕ್ರಮ ಅನುಷ್ಟಾನ ಮಾಡಲು ಕೇಂಧ್ರ ಸರ್ಕಾರ ಸೂಚನೆ ನೀಡಿದೆ. ಕಠಿಣ ಕ್ರಮ ಅನುಷ್ಟಾನ ಸಂಬಂಧ ಶೀಘ್ರವೇ ಎಲ್ಲಾ ಸಚಿವರ ಜತೆ ಸಿಎಂ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ರಾಜ್ಯದ ಜಿಎಸ್ ಟಿ ಪಾಲನ್ನ ನೀಡುವಂತೆ ಕೇಂದ್ರಕ್ಕೆ ಒತ್ತಡ ಹಾಕಿದ್ದೇವೆ.  ನಿನ್ನೆ ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯಿಸಿದ್ದೇವೆ. ನಮ್ಮ ಪಾಲಿನ 11 ಸಾವಿರ ಕೋಟಿ ರೂ. ಕೊಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗಿದೆ. ಹಾಗೆಯೇ ಲಾಕ್ ಡೌನ್ ನಿಂದಾದ  ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಕೇಂಧ್ರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ನುಡಿದರು.

Key words: Central- notice – strict action -until -June 30th-Home Minister- Basavaraja Bommai