ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ..

ಮೈಸೂರು.ಜು,30,2020(www.justkannada.in): ಕೊರೋನಾ ಮಹಾಮಾರಿಯ ಆತಂಕದ ನಡುವೆ  ಇಂದಿನಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದಾರೆ.jk-logo-justkannada-logo

ಇಂದು ಜೀವಶಾಸ್ತ್ರ ಹಾಗೂ ಗಣಿತ ಶಾಸ್ತ್ರ ಪರೀಕ್ಷೆ, ನಾಳೆ ಭೌತಶಾಸ್ತ್ರ ಹಾಗೂ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಸರ್ಕಾರದಿಂದ  ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮೈಸೂರಿನಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಜಿಲ್ಲೆಯಲ್ಲಿ ಒಟ್ಟು 26 ಪರೀಕ್ಷಾ ಕೇಂದ್ರಗಳಿವೆ. ಮೈಸೂರು ನಗರದಲ್ಲೆ 20 ಪರೀಕ್ಷಾ ಕೇಂದ್ರಗಳಿದ್ದು , 10,368 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.cet-exam-begins-today-mysore

ಪರೀಕ್ಷಾ ಕೇಂದ್ರದ 200/ಮೀಟರ್ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, 200 ಮೀಟರ್ ಅಳತೆಯಲ್ಲಿ ಜರಾಕ್ಸ್ ಕೇಂದ್ರಗಳು ಬಂದ್ ಮಾಡಲಾಗಿದೆ. ಮೈಸೂರಿನಲ್ಲಿ ಮೂವರು ಕೋರೋನಾ ಸೋಂಕಿತ ವಿದ್ಯಾರ್ಥಿಗಳಿದ್ದು ಅವರಿಗೆ ಪ್ರತೇಕ ವ್ಯವಸ್ಥೆ ಮಾಡಲಾಗಿದೆ. ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿಯ ಕೊವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

Key words: CET –exam- begins- today-mysore