ಸಿಇಟಿ ಪರೀಕ್ಷೆ ದಿನಾಂಕ ನಿಗದಿ: ಆಗಸ್ಟ್ 28, 29, 30ರಂದು ಪರೀಕ್ಷೆ

ಬೆಂಗಳೂರು, ಜೂನ್ 08, 2021 (www.justkannada.in): 2021ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ರಾಜ್ಯಾದ್ಯಂತ ಸುಮಾರು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಆಗಸ್ಟ್ 28 – ಜೀವಶಾಸ್ತ್ರ, ಗಣಿತ ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಿಯುಸಿ ಅಂಕಗಳ ವಿಚಾರವಾಗಿ ನೀತಿಯಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು. ಪದವಿ ಕಾಲೇಜುಗಳಿಗೆ, ಇತರ ಕೋರ್ಸ್‌ಗಳಿಗೆ ಪ್ರವೇಶ ನೀಡುವ ದೃಷ್ಟಿಯಿಂದ ಅಗತ್ಯವಿರುವ ಪೂರ್ವ ಸಿದ್ಧತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ವಿಜ್ಞಾನ ವಿಭಾಗದ ಡಿಗ್ರಿ ವಿದ್ಯಾರ್ಥಿಗಳ ಪ್ರವೇಶವನ್ನು CET ಮುಖಾಂತರವೇ ನಿರ್ಧರಿಸುವ ಚಿಂತನೆಯಿದೆ ಎಂದು ತಿಳಿಸಿದ್ದಾರೆ.