ಸಿಇಟಿ ಪರೀಕ್ಷೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಕೋವಿಡ್ ಸೋಂಕಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ-ಮೈಸೂರು ಡಿಸಿ ಅಭಿರಾಂ ಜೀ ಶಂಕರ್ ಮಾಹಿತಿ…

ಮೈಸೂರು,ಜು,29,2020(www.justkannada.in):  ನಾಳೆ ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಜಿಲ್ಲಾಡಳಿದ ಸಿಧ್ದವಾಗಿದೆ. ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಮಾಹಿತಿ ನೀಡಿದ್ದಾರೆ. jk-logo-justkannada-logo

ಪೇಸ್ ಬುಕ್ ಲೈವ್ ನಲ್ಲಿ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್.  ಜಿಲ್ಲಾದ್ಯಂತ ಜುಲೈ30 ಮತ್ತು 31ರಂದು ಸಿಇಟಿ ಜಿಲ್ಲೆಯಾದ್ಯಂತ 26 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,368 ವಿದ್ಯಾರ್ಥಿಗಳು ಪರಿಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿರುವ ನಿಷೇದಾಜ್ಞ ಜಾರಿ ಮಾಡಲಾಗಿದೆ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲ ಆದೇಶಿಸಲಾಗಿದೆ. ಮುಂಜಾಗ್ರತಾ ಕ್ರಮಾವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಜ್ ಮಾಡಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಆಗಮಿಸುವವರಿಗೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಮಾಸ್ಕ್ ಧರಿಸುವುದು, ಸ್ಯಾನಿಟೈಜ್ ಬಳಕೆ ಕಡ್ಡಾಯ ಮಾಡಲಾಗಿದೆ ಎರಡು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ತಿಳಿಸಿದರು.cet- exam- mysore- DC- Abhiram ji Shankar

ಈಗಾಗಲೆ ಜಿಲ್ಲೆಯಲ್ಲಿ ಕೊವಿಡ್ ಸೋಂಕು ಇರುವ ಮೂವರ ವಿದ್ಯಾರ್ಥಿಗಳಿ ಇದ್ದಾರೆ. ಅವರಿಗೆ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇರುವ ಕೋವಿಡ್ ಕೇರ್ ಸೆಂಟರ್ ನಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಸೋಂಕಿತರನ್ನು ಆ್ಯಂಬುಲೆನ್ಸ್ ಮೂಲಕ  ಕರೆತರುವ ವ್ಯವಸ್ಥೆ ಜೊತೆಗೆ ವೈದ್ಯರು ಸೇರಿದಂತೆ ಉಪನ್ಯಾಸಕರನ್ನು ಮೇಲ್ವಿಚಾರಕಾಗಿ ನೇಮಕ ಮಾಡಲಾಗಿದೆ. ಉತ್ತರ ಪತ್ರಿಕೆ ಪ್ರತೇಕವಾಗಿಡಲು ವ್ಯವಸ್ಥೆ ಮಾಡಲಾಗಿದೆ.

ಕಂಟೈನ್ಮೆಟ್ ವ್ಯಾಪ್ತಿಯಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿಬೆಂಚ್ ನಲ್ಲಿ ಕೇವಲ ಇಬ್ಬರು ವಿದ್ಯಾರ್ಥಿಗಳು ಕೂರಿಸುವಂತೆ ಸುಚನೆ ನೀಡಲಾಗಿದೆ. ಯಾವುದೇ ಕೋವಿಡ್ ಲಕ್ಷಣಗಳಿದ್ದಲ್ಲಿ ಮೇಲ್ವಿಚಾರಕರಿಗೆ ತಿಳಿಸಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಭಿರಾಂ ಜೀ ಶಂಕರ್ ತಿಳಿಸಿದರು.

Key words: c