ಕೇಂದ್ರೀಯ ವಿವಿಗಳಲ್ಲಿ ಪದವಿ ಪ್ರವೇಶಕ್ಕೂ ಸಿಇಟಿ

Promotion

ಬೆಂಗಳೂರು, ಡಿಸೆಂಬರ್ 27, 2020 (www.justkannada.in): ಕೇಂದ್ರೀಯ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಪ್ರವೇಶಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈ ಸಂಬಂಧ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಉನ್ನತ ಗುಣಮಟ್ಟದ ಬೌದ್ಧಿಕ ಸಾಮರ್ಥ್ಯ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಂಡಿದೆ.

ಕಾಲೇಜು ಪ್ರವೇಶ ಪ್ರಕ್ರಿಯೆ ಸಂದರ್ಭದಲ್ಲಿ 12 ನೇ ತರಗತಿ ಫಲಿತಾಂಶವನ್ನು ಆಧರಿಸಿ ಕಟ್ ಆಫ್ ಮಾರ್ಕ್ಸ್ ಕಿರಿಕಿರಿ ತಪ್ಪಿಸುವ ಸಲುವಾಗಿ ಸರ್ಕಾರ ಮುಂದಿನ ಶೈಕ್ಷಣಿಕ ವರ್ಷದಿಂದ ಸಿಇಟಿ ನಡೆಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ಸಿಇಟಿ ಬರೆದರೆ ಮಾತ್ರ ಕೇಂದ್ರ ವಿವಿಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.