ಜುಲೈ 30 ರಂದು ಸಿಇಟಿ ಫಲಿತಾಂಶ ಪ್ರಕಟ.

kannada t-shirts

ಬೆಂಗಳೂರು,ಜುಲೈ,25,2022(www.justkannada.in):  ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಈ ವಿಚಾರ ತಿಳಿಸಿರುವ ಸಚಿವ ಅಶ್ವಥ್ ನಾರಾಯಣ್, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ  ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.

Key words: CET –result- declared – 30th July.

website developers in mysore