ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ- ಮಾಜಿ ಸಚಿವ ಅರಗ ಜ್ಞಾನೇಂದ್ರ.

Promotion

ಶಿವಮೊಗ್ಗ,ಸೆಪ್ಟಂಬರ್,16,2023(www.justkannada.in):  ಉದ್ಯಮಿಗೆ ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ  ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಅರಗ ಜ್ಞಾನೇಂದ್ರ, ಬಿಜೆಪಿಯಲ್ಲಿ ದುಡ್ಡು ಕೊಟ್ಟು ಟಿಕೆಟ್ ಪಡೆಯುವ ಸಂಸ್ಕೃತಿ ಇಲ್ಲ.  ಅವರು ಯಾರೋ ಹೇಳಿದರು ಅಂತಾ ಟಿಕೆಟ್ ಕೊಡಲ್ಲ. ಸಿಸಿಬಿಯಿಂದ ಚೈತ್ರಾ ಕುಂದಾಪುರ  ವಿಚಾರಣೆ ನಡೆಯುತ್ತಿದೆ. ತಪ್ಪು ಮಾಡಿದ್ರೆ ಶಿಕ್ಷೆ ಅನುಭವಿಸಲಿ ಎಂದರು.

ದೆಹಲಿ ಸಂಪರ್ಕ ಇದೆ.  ಆರ್ ಎಸ್ ಎಸ್  ಸಂಪರ್ಕ ಇದೆ ಅಂತಾ ಹೇಳ್ತಾರೆ ಅಷ್ಟೆ. ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.

Key words: Chaitra Kundapura- fraud case – BJP – Former Minister-Araga Gyanendra.