ರಾಕ್’ಲೈನ್ ಪ್ರೊಡಕ್ಷನ್’ನಲ್ಲಿ ಚಾಲೆಂಜಿಂಗ್ ಸ್ಟಾರ್ ಮುಂದಿನ ಸಿನಿಮಾ ಡಿ-56

Promotion

ಬೆಂಗಳೂರು, ಜೂನ್ 25, 2022 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದು, ಚಿತ್ರದ ಬಹುತೇಕ ಶೂಟಿಂಗ್ ಕಂಪ್ಲೀಟ್ ಆಗಿದೆ.

ಈ ಮಧ್ಯೆ ದರ್ಶನ್ ತಂಡದಿಂದ ಮತ್ತೊಂದು ಖುಷಿಯ ವಿಚಾರ ಹೊರ ಬಿದ್ದಿದೆ. ದಚ್ಚು ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆಗೆ ನಿರ್ಮಾಪಕ ರಾಕ್ ಲೈನ್ ಉತ್ತರ ನೀಡಿದ್ದಾರೆ.

ಸದ್ಯಕ್ಕೆ ದರ್ಶನ್ ನಟನೆಯ ಮುಂದಿನ ಸಿನಿಮಾಗೆ ಡಿ 56 ಎಂದು ಹೆಸರಿಟ್ಟಿದ್ದು ಚಿತ್ರಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದರ್ಶನ್ ಅವರ ಮುಂದಿನ ಸಿನಿಮಾ ಸೆಟ್ಟೇರಲಿದೆ ಎಂದು ರಾಕ್ ಲೈನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

“D 56 ಸಿನಿಮಾ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ. ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲಾ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.