ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ರಾಬರ್ಟ್’ ಟೀಸರ್ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು, ಜನವರಿ 07, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.

ಫೆಬ್ರವರಿ 16 ರಂದು ಅಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬದ ದಿನ ಟೀಸರ್ ಬಿಡುಗಡೆಯಾಗಲಿದೆ. ಈ ಮೂಲಕ ಬರ್ತ್ ಡೇಗೆ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಸಿಗಲಿದೆ.

ಒಡೆಯ ಯಶಸ್ಸಿನ ಬಳಿಕ ಡಿ ಬಾಸ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಸಿನಿಮಾ ‘ರಾಬರ್ಟ್’. ಈ ಸಿನಿಮಾದ ಪೋಸ್ಟರ್ ಕ್ರಿಸ್ ಮಸ್ ಸಂದರ್ಭದಲ್ಲಿ ಬಿಡುಗಡೆಯಾಗಿತ್ತು. ಈಗಾಗಲೇ ಚಿತ್ರೀಕರಣ ಪೂರೈಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾಡುತ್ತಿದೆ.