ಶ್ರೀಲಂಕಾ ವಿರುದ್ಧ 3ನೇ ಏಕದಿನ ಪಂದ್ಯದಲ್ಲಿ ಪಡಿಕ್ಕಲ್’ಗೆ ಚಾನ್ಸ್ ಸಾಧ್ಯತೆ: ಇಂದು ಅಂತಿಮ ಪಂದ್ಯ

Promotion

ಬೆಂಗಳೂರು, ಜುಲೈ 23, 2021 (www.justkannada.in): ಶ್ರೀಲಂಕಾ ವಿರುದ್ಧ 3ನೇ ಏಕದಿನ ಪಂದ್ಯಕ್ಕಾಗಿ ಶಿಖರ್ ಧವನ್ ಪಡೆ ಸಜ್ಜಾಗಿದೆ.

ಮೊದಲ ಏಕದಿನ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದುಕೊಂಡಿದ್ದ ಭಾರತ, 2ನೇ ಪಂದ್ಯದಲ್ಲಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲೂ ಗೆದ್ದು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

ಮೊದಲೆರಡು ಪಂದ್ಯಗಳಲ್ಲಿ ಅವಕಾಶ ವಂಚಿತರಾಗಿದ್ದ ಆಟಗಾರರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಮೊದಲೆರಡು ಪಂದ್ಯಗಳಲ್ಲಿ ಫಾರ್ಮ್​ ಪ್ರದರ್ಶಿಸಿದ್ದ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಕಾದಿದ್ದ ಆಟಗಾರರನ್ನು ಕಣಕ್ಕಿಳಿಸುವ ಪ್ಲ್ಯಾನಿಂಗ್​ನಲ್ಲಿದ್ದಾರೆ ಕೋಚ್ ರಾಹುಲ್ ದ್ರಾವಿಡ್.

ಅಂತಿಮ ಏಕದಿನ ಪಂದ್ಯ ನಡೆಯುತ್ತಿರುವುದರಿಂದ ದೇವದತ್ ಪಡಿಕ್ಕಲ್​​ಗೆ ಅಥವಾ ರುತುರಾಜ್​ಗೆ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುವ ಅವಕಾಶ ನೀಡುವ ಸಾಧ್ಯತೆಯಿದೆ.