ಚಂದ್ರಯಾನ-2 ಉಡಾವಣೆ ಕೊನೇ ಕ್ಷಣದಲ್ಲಿ ಮುಂದೂಡಿಕೆ: ಜಿಎಸ್​ಎಲ್​ವಿ ರಾಕೆಟ್​ನಲ್ಲಿ ತಾಂತ್ರಿಕ ತೊಂದರೆ

ಶ್ರೀಹರಿಕೋಟಾ:ಜುಲೈ-15(www.justkannada.in) ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-2 ಉಡಾವಣೆ ಕೊನೇ ಕ್ಷಣದಲ್ಲಿ ರದ್ದಾಗಿದೆ. ಇಂದು ಮುಂಜಾನೆ ಉಡಾವಣೆಯಾಗಬೇಕಿದ್ದ ಚಂದ್ರಯಾನ-2 ತಾತ್ಕಾಲಿಕವಾಗಿ ರದ್ದುಗೊಂಡಿದೆ. ಜಿಎಸ್​ಎಲ್​ವಿ ಉಡಾವಣಾ ವಾಹಕದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದರಿಂದ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಇಸ್ರೋ ಹೇಳಿದೆ

ಇಂದು ಮುಂಜಾನೆ 2 ಗಂಟೆ 51 ನಿಮಿಷಕ್ಕೆ ಉಡಾವಣೆ ಆಗಬೇಕಿತ್ತು. ಉಡಾವಣೆಗೂ 56 ನಿಮಿಷ 24 ಸೆಕೆಂಡ್​ ಮೊದಲು ಸ್ಥಗಿತಗೊಂಡಿದೆ. ಈ ಬಗ್ಗೆ ಶ್ರೀಹರಿಕೋಟಾದಲ್ಲಿ ಇಸ್ರೋ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ರಾಕೆಟ್ ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆಯನ್ನು ಗಮನಿಸಿದ್ದೇವೆ. ಉಡಾವಣೆಗೆ ನಿಗದಿಪಡಿಸಿದ ಸಮಯದಲ್ಲಿ ಅದನ್ನು ಸರಿಪಡಿಸಲು ಸಾಧ್ಯವಿಲ್ಲ. ಹಾಗಾಗಿ ಚಂದ್ರಯಾನ 2 ರದ್ದುಗೊಳಿಸಿದ್ದು ಮುಂದಿನ ದಿನಾಂಕ ಶೀಘ್ರದಲ್ಲೇ ಪ್ರಕಟ ಮಾಡುತ್ತೇವೆ ಎಂದು ಇಸ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಚಂದ್ರಯಾನ-2 ಉಡಾವಣೆ ಕೊನೇ ಕ್ಷಣದಲ್ಲಿ ಮುಂದೂಡಿಕೆ: ಜಿಎಸ್​ಎಲ್​ವಿ ರಾಕೆಟ್​ನಲ್ಲಿ ತಾಂತ್ರಿಕ ತೊಂದರೆ
chandrayaan-2 mission launch has been called off due to a technical snag in the launch vehicle