ಚಂದ್ರಯಾನ-3 ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ.

Promotion

ಬೆಂಗಳೂರು,ಜುಲೈ,14,2023(www.justkannada.in): ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದೆ.  ಈ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ‍್ಧರಾಮಯ್ಯ,  ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲಾಗಿದೆ. ಈ ಸಾಧನೆಯು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

Key words: Chandrayaan-3 -successful- launch- CM Siddaramaiah- congratulates –ISRO- team