ಚನ್ನಪಟ್ಟಣ ಅಭಿವೃದ್ಧಿಯಾಗಿದ್ದು ಹೆಚ್.ಡಿಕೆಯಿಂದಲ್ಲ, ಬಿಜೆಪಿಯಿಂದ- ಸಿ.ಪಿ ಯೋಗೇಶ್ವರ್ ಟಾಂಗ್

Promotion

ರಾಮನಗರ,ಡಿಸೆಂಬರ್,22,2022(www.justkannada.in):  ಭಾವನಾತ್ಮಕವಾಗಿ ಜನರನ್ನು ಸೆಳೆಯಲು ಹೆಚ್​ ಡಿಕೆ ಮುಂದಾಗಿದ್ದಾರೆ. ಚನ್ನಪಟ್ಟಣ ಅಭಿವೃದ್ಧಿಯಾಗಿದ್ದು ಹೆಚ್.ಡಿಕೆಯಿಂದಲ್ಲ, ಬಿಜೆಪಿಯಿಂದ ಎಂದು ವಿಧಾನ ಪರಿಷತ್ ಸದಸ್ಯ  ಸಿ.ಪಿ ಯೋಗೇಶ್ವರ್ ಟಾಂಗ್ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್,  ನಮ್ಮ ಕ್ಷೇತ್ರ ಅಭಿವೃದ್ಧಿ ಆಗಿರೋದು ಬಿಜೆಪಿಯಿಂದ. 2023ರ ಚುನಾವಣೆಗೆ ನಾನು ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಪಕ್ಷ ಅಧಿಕಾರಕ್ಕೆ ತಂದ ಬಳಿಕ ಮಂತ್ರಿ ಆಗಬೇಕು  ಎಂದರು.

ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನೂ ಮಾಡಲಿಲ್ಲ. ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿ ಆಗಿದ್ದು  ಹೆಚ್ ​​ಡಿ ಕುಮಾರಸ್ವಾಮಿ ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಮತ ಹಾಕಿಸಿಕೊಂಡಿದ್ದಾರೆ. ನನ್ನನ್ನು ತೀರಿಸುವವರು, ಉಳಿಸುವವರು ನನ್ನ ಕ್ಷೇತ್ರದ ಮತದಾರರು. 2023ಕ್ಕೆ ರಾಮನಗರ, ಚನ್ನಪಟ್ಟಣ ಕ್ಷೇತ್ರ ಜನ ತಕ್ಕ ಉತ್ತರ ಕೊಡುತ್ತಾರೆ. ಚುನಾವಣೆ ಬಂದರೆ ಕಣ್ಣೀರು ಹಾಕಿ, ಇದೇ ಕೊನೆ ಚುನಾವಣೆ ಅಂತಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.

Key words: Channapatna – developed -not – HDK-MLC- CP Yogeshwar