ಚೆನ್ನಮ್ಮ ವಿವಿ: ಡಿಪ್ಲೊಮಾ ಪಡೆದವರಿಗೆ ಬಿ.ಕಾಂ. 3ನೇ ಸೆಮಿಸ್ಟರ್ ಗೆ ಪ್ರವೇಶ, ಕಾಲಾವಧಿ 3 ದಿನ ವಿಸ್ತರಣೆ

Promotion

ಬೆಳಗಾವಿ,ಡಿಸೆಂಬರ್,20,2021(www.justkannada.in):  ಕಮರ್ಷಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ನೇರವಾಗಿ ಬಿ.ಕಾಂ. 3ನೇ ಸೆಮಿಸ್ಟರಿಗೆ ಪ್ರವೇಶ ಪಡೆಯಲು ಇದ್ದ ಕಾಲಾವಕಾಶವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.

ಈ ಬಗ್ಗೆ ಸೋಮವಾರ ಇಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್, ಈ ಹಿಂದಿನ ಸೂಚನೆಯಂತೆ ಕಡ್ಡಾಯ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡಬಹುದು. ರಾಣಿ ಚೆನ್ನಮ್ಮ ವಿವಿ ವ್ಯಾಪ್ತಿಗೆ ಬರುವ ಕಾಲೇಜುಗಳು ಇಂತಹ ವಿದ್ಯಾರ್ಥಿಗಳ ಪಟ್ಟಿಯನ್ನು ನಂತರ ವಿಶ್ವವಿದ್ಯಾಲಯಕ್ಕೆ ಕಳಿಸಿಕೊಡಬೇಕು. ಬಳಿಕ ಇಂತಹ ಪ್ರವೇಶಗಳಿಗೆ ಅನುಮೋದನೆ ಕೊಡಲಾಗುವುದು ಎಂದರು.

ಈಗ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ನಿಗದಿತ ಪಠ್ಯಕ್ರಮವನ್ನು ಸಂಪೂರ್ಣವಾಗಿ ಬೋಧಿಸಲಾಗುವುದು. ಆದ್ದರಿಂದ ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ಸಚಿವರು ಈ ಕ್ರಮ ತೆಗೆದುಕೊಂಡಿದ್ದಾರೆ.

Key words: Chennamma university-: B.Com – Diploma -holders -Admission – 3rd Semester-3 Day- Extension.