ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರು ಪ್ರವಾಸ

ಮೈಸೂರು, ಜನವರಿ 29, 2023 (www.justkannada.in): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮೈಸೂರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಮಧ್ಯಾಹ್ನ 12:30 ಗಂಟೆಗೆ ಎಚ್ ಡಿ ಕೋಟೆ ರಸ್ತೆಯ ಉದ್ಬೂರು ಕ್ರಾಸ್ ನ ಹಾಳಾಳು ಗ್ರಾಮದಲ್ಲಿ ಡಾ. ವಿಷ್ಣುವರ್ಧನ್ ವಿಷ್ಣುವರ್ಧನ್ ಪ್ರತಿಷ್ಠಾನ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಡಾ. ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಸಮಾರಂಭವನ್ನು ಸಿಎಂ ಉದ್ಘಾಟಿಸುವರು.

ನಂತರ ಮಧ್ಯಾಹ್ನ 2:30 ಗಂಟೆಗೆ ಗಂಟೆಗೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.